ಭೂಕೈಲಾಸ ಮುಕ್ತಿ ಮಂದಿರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ

ಭೂಕೈಲಾಸ ಮುಕ್ತಿ ಮಂದಿರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  CM D.K. Shivakumar visits Bhookailasa Mukti Mandira


  ಲಕ್ಷ್ಮೇಶ್ವರ  02: ಸಮೀಪದ ಭೂಕೈಲಾಸ ಮುಕ್ತಿ ಮಂದಿರಕ್ಕೆ ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭಿಕ್ಷೆಗಾಗಿ ಪ್ರಾರ್ಥಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ಅತ್ಯಂತ ವಿಶೇಷ ಹಾಗೂ ಪವಿತ್ರ ಸ್ಥಳವಾಗಿದೆ ಎಂದು ಹೇಳಿದರು. “ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ” ಎಂಬ ಅಜ್ಜನವರ ಪುಣ್ಯ ಸಂದೇಶವನ್ನು ಸ್ಮರಿಸಿದ ಅವರು, ನಾಡಿನ ಸಂಕಷ್ಟದಲ್ಲಿರುವ ಅನ್ನದಾತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದರು.  ಈ ಸಂದರ್ಭದಲ್ಲಿ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಸಚಿವರಾದ ಶ್ರೀ ಎಸ್‌.ಎಸ್‌. ಮಲ್ಲಿಕಾರ್ಜುನ ಸೇರಿದಂತೆ ನಾಯಕರು ಹಾಗೂ ಸ್ವಾಮೀಜಿಗಳು ಉಪಸ್ಥಿತರಿದ್ದರು.