ಲಕ್ಷ್ಮೇಶ್ವರಕ್ಕೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅದ್ದೂರಿ ಸ್ವಾಗತ

ಲಕ್ಷ್ಮೇಶ್ವರಕ್ಕೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅದ್ದೂರಿ ಸ್ವಾಗತ  CM DK Shivakumar receives grand welcome upon arrival in Lakshmeshwaram

ಲಕ್ಷ್ಮೇಶ್ವರ  02: ಪಟ್ಟಣಕ್ಕೆ ಬರ ಅಧ್ಯಯನ ಪರೀಶೀಲನೆಗೆ ಪಟ್ಟಣದ ಉಮಾ ವಿದ್ಯಾಲಯ ಹೈಸ್ಕೂಲ್ ಮೈದಾನಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ಅವರು ಕಾರ ಮೂಲಕ ಮುಕ್ತಿಮಂದಿರಕ್ಕೆ ಆಗಮಿಸುತ್ತಿದ್ದ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಸೇಬು ಹಣ್ಣಿನ ಮಾಲೆ ಹಾಕಿ ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡರು ಮುಕ್ತಿಮಂದಿರಕ್ಕೆ ತೆರಳಿದ ಡಿಕೆ ಶಿವಕುಮಾರ್ ವೀರ ಗಂಗಾಧರ ಅಜ್ಜಯ್ಯನವರ ಕರ್ತೃಗದ್ದಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು ಉಮಾ ವಿದ್ಯಾಲಯ ಸ್ಕೂಲ್ ಮೈದಾನದಲ್ಲಿ ಶಿರಹಟ್ಟಿ ಮತಕ್ಷೇತ್ರದಲ್ಲಿ ಕಳೆದ 8-10 ತಿಂಗಳಿನಿಂದ ರೈತರ ಸಮಸ್ಯೆಗಳನ್ನು ಆಲಿಸುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಿರಹಟ್ಟಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಿರಂತರವಾಗಿ ಹೋರಾಟದಮೂಲಕ ಶಿರಹಟ್ಟಿ ಮತಕ್ಷೇತ್ರದಜನರ ಮನಸ್ಸನ್ನು ಗೆಲ್ಲುತ್ತಿರುವ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಪಕ್ಷದ ಸೇವಾ ಆಕಾಂಕ್ಷಿ ಬಿ ಟಿ ಚಂದ್ರಶೇಖರ್ ಅವರು ಹೆಲಿಕ್ಯಾಪ್ಟರ್ ಇಳಿದು ಬಂದ ಡಿಕೆ ಶಿವಕುಮಾರ್ ಅವರಿಗೆ ಶಿರಹಟ್ಟಿ ಮತಕ್ಷೇತ್ರದಲ್ಲಿ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ಮತ್ತು ನೀರಾವರಿಗೆ ಆದ್ಯತೆ ನೀಡುವಂತೆ ಹಸಿರು ಶಾಲು ಹೂ ಮಾಲೆ ಹಾಕಿ ಮನವಿ ಪತ್ರವನ್ನು ಸಲ್ಲಿಸಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು ಬಿಟಿ ಚಂದ್ರಶೇಖರ್ ಅವರು ಶಿರಹಟ್ಟಿ ಮತಕ್ಷೇತ್ರದ ಅಭಿವೃದ್ಧಿ ಬಗ್ಗೆ ಇಟ್ಟಿರುವ ಕಾಳಜಿ ನೋಡಿ ರೈತರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.