ಡಿ.ದೇವರಾಜ ಅರಸು ಅವಧಿ ದಾಟಿ ದಾಖಲೆ ಮಾಡಿದ ಸಿಎಂ ಸಿದ್ದರಾಮಯ್ಯ
CM Siddaramaiah sets a record by surpassing D. Devaraj's term
ಹಾವೇರಿ 06: ರಾಜ್ಯದಲ್ಲಿ ಮಾಜಿಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾದ ಅವಧಿಯನ್ನು ದಾಟಿ ದಾಖಲೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು.ಅಹಿಂದ ನಾಯಕರಾಗಿ ತಾವುಗಳು ಅಹಿಂದ ವರ್ಗಗಳ ಹಾಗೂ ದಲಿತರ ಒಳಮಿಸಲಾತಿಯ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿದರೆ ಹೆಚ್ಚು ಅವಧಿಯ ಸಿಎಂ ಆಗಿದ್ದಕ್ಕೂ ಸಾರ್ಥಕತೆ ಆಗಲಿದೆ ಎಂದು ಮಾದಿಗ,ಸಮಗಾರ,ಮಚಗಾರ, ಡೊಹರ,ಡಕ್ಕಲಿಗ ಜಾತಿ-ಉಪಜಾತಿಗಳ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕರಾದ ಉಡಚಪ್ಪ ಮಾಳಗಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಸುಪ್ರೀಂಕೋರ್ಟಿನ ಏಳು ಸದಸ್ಯರ ಪೀಠ 2024 ಆಗಸ್ಟ್ 1ರಂದು ಐತಿಹಾಸಿಕ ತೀರ್ು ನೀಡಿ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಕಾರಗಳಿಗೆ ಇದೆ ಎಂದು ಸ್ಪಷ್ಟವಾಗಿ ಹೇಳಿತು.ಹರ್ಯಾಣ, ತೆಲಂಗಾಣ, ಆಂಧ್ರ್ರದೇಶ ಸರ್ಕಾರಗಳು ಕೇವಲ 6 ತಿಂಗಳಲ್ಲಿ ಒಳಮೀಸಲಾತಿಯನ್ನು ವೈಜ್ಞಾನಿಕವಾಗಿ,ಗೊಂದಲ ಇಲ್ಲದಂತೆ ಜಾರಿ ಮಾಡಿದವು ಆದರೆ ಕರ್ನಾಟಕ ಸರ್ಕಾರ 16 ತಿಂಗಳ ನಂತರವೂ ತಾನೇ ಮಾಡಿಕೊಂಡ ಗೊಂದಲಗಳಿಂದ ಒಳಮೀಸಲಾತಿ ಜಾರಿಮಾಡಲಾಗದೆ ತಿಣುಕಾಡುತ್ತಿದೆ.
ಎಸ್.ಸಿ ವರ್ಗದಲ್ಲಿನ 101 ಜಾತಿಗೂ ಸಾಮಾಜಿಕ ನ್ಯಾಯದಡಿ ಒಳಮಿಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಸರ್ಕಾರದ ಶೀಘ್ರವಾಗಿ ಕ್ರಮಕೈಗೊಳ್ಳಬೇಕು.ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಶೀಘ್ರದಲ್ಲಿಯೇ ರಾಜ್ಯದಲ್ಲಿ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ,ಜಿಲ್ಲಾ ಪಂಚಾಯತಿ,ತಾಲ್ಲೂಕ ಪಂಚಾಯತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು,ಚುನಾವಣೆಗಳು ಬರುವ ಮುನ್ನವೇ ಸರ್ಕಾರ ಒಳಮಿಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವಂತಾಗಬೇಕು. ಇಲ್ಲದಿದ್ದರೆ ಚುನಾವಣೆಯ ಮೇಲೆ ವ್ಯತರಿಕ್ತ ಪರಿಣಾಮ ಅನುಭವಿಸಬೇಕಾಗುತ್ತದೆ.
ದಾಖಲೆ ಅವಧಿಯ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ನಮ್ಮ ಈ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸವನ್ನು ನಾವು ಇಟ್ಟುಕೊಂಡಿದ್ದು,ವಿಶ್ವಾಸ ಉಳಿಸಿಕೊಳ್ಳುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಅವರು ಮಾಡಲಿ ಎಂದು ಉಡಚಪ್ಪ ಮಾಳಗಿ ಅವರು ಡಿ.ದೇವರಾಜ ಅರಸು ಅವರ ಮುಖ್ಯಮಂತ್ರಿಯಾದ ಅವಧಿಯನ್ನು ದಾಟಿ ದಾಖಲೆ ಮಾಡಿದ ಸಿದ್ದರಾಮಯ್ಯ ಅವರಿಗೆ ಪ್ರಕಟಣೆಯ ಮೂಲಕ ಶುಭ ಕೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 