ಬೆಂಗಳೂರು, ಫೆ 25,ಭಾರತಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಮೆಲನಿಯಾ ಟ್ರಂಪ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಮ್ಮಿಕೊಂಡಿರುವ ಔತಣಕೂಟದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಗೆ ನಡೆಯಲಿರುವ ಔತಣಕೂಟದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ತಲುಪಿದ್ದಾರೆ. ಔತಣಕೂಟದ ನಂತರ ಅವರು ಅಲ್ಲಿನ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿ, ಬುಧವಾರ ಬೆಳಗ್ಗೆ ಬೆಂಗಳೂರಿಗೆ ಮರಳಲಿದ್ದಾರೆ.