ಸಿಎಂ ಬದಲಾವಣೆ ಹೇಳಿಕೆಗೆ ಶೀಘ್ರವೇ ತೆರೆ ಬೀಳಲಿದೆ: ಸಚಿವ ಸತೀಶ ಜಾರಕಿಹೊಳಿ
CM change statement will be revealed soon: Minister Satish Jarkiholi
ಲೋಕದರ್ಶನ ವರದಿ
ಬೆಳಗಾವಿ 18: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಕೆ.ಎನ್. ರಾಜಣ್ಣ ಅವರ ‘ಮುಂದಿನ ಸಿಎಂ ಪರಮೇಶ್ವರ’ ಎಂಬ ಹೇಳಿಕೆಗೆ ಹೈಕಮಾಂಡ್ ಮಟ್ಟದಲ್ಲೇ ಶೀಘ್ರದಲ್ಲಿ ತೆರೆ ಬೀಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಇಂದು ನಗರದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಾಜಣ್ಣ ಅವರ ಮುಂದಿನ ಸಿಎಂ ಪರಮೇಶ್ವರ ಆಗಲಿ ಮತ್ತು ಅನೇಕರು ಮುಂದಿನ ಸಿ ಎಮ ಡಿ ಕೆ ಸಿ ಬ್ಯಾನರ ಬಗ್ಗೆ ಮತ್ತು ಹೇಳಿಕೆಗೆ ಆದಷ್ಟು ಬೇಗ ದೆಹಲಿಯಿಂದ ಬುಲಾವ ಬರಲಿದ್ದು, ಈ ವಿಚಾರಗಳು ಅಲ್ಲಿ ಚರ್ಚೆಯಾಗಿ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದ ವಿಶ್ವಾಸವನ್ನು ವ್ಯಕ್ತಪಡಿಸಿದರು. ಖಾಸಗಿ ತರಕಾರಿ ಮಾರುಕಟ್ಟೆಯವರ ಸಮಸ್ಯೆಗೆ ಸಂಬಂಧಿಸಿದಂತೆ ಇಂದು ಸಭೆಯನ್ನು ಕರೆಯಲಾಗಿದೆ. ನಾವು ಮಾರುಕಟ್ಟೆಯವರೊಂದಿಗೆ ಚರ್ಚೆ ನಡೆಸುತ್ತೇವೆ. ನಮ್ಮಿಂದ ಆದ ಸಹಾಯವನ್ನು ಮಾಡುತ್ತೇವೆ. ಎಲ್ಲದಕ್ಕೂ ಕಾನೂನು ಮೊದಲು. ಅದರಡಿ ಅನುಕೂಲವನ್ನು ಮಾಡಿಕೊಡುತ್ತೇವೆ ಎಂದು ಹೇಳಿದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 