ಬೆಂಗಳೂರು, ಅಕ್ಟೋಬರ್ 11: ಖ್ಯಾತ ಸ್ಯಾಕ್ಸಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವಿದೇಶಿ ವಾದ್ಯವೊಂದನ್ನು ಶಾಸ್ತ್ರೀಯ ಸಂಗೀತಕ್ಕೆ ಹೊಂದಿಸಿಕೊಂಡು ಮಾಧುರ್ಯದ ಹೊನಲು ಹರಿಸಿದ ಶ್ರೇಷ್ಠ ಸಂಗೀತಗಾರ ಅವರು, ಅವರ ನಿಧನದಿಂದ ಸಂಗೀತ ಲೋಕದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ , ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.