ರೈತರ ಮೇಲಿನ ಮೊಕದ್ದಮೆಗಳನ್ನು ವಾಪಾಸ್ ಪಡೆಯುವಂತೆ ಸಿಎಂ ಸೂಚನೆ

ಬೆಂಗಳೂರು, ಆ 26     ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರೈತ ಸಂಘಟನೆಗಳ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರ ಜತೆ ಸುದೀರ್ಘ ಸಭೆ ನಡೆಸಿದರು.  

ರೈತ ಮುಖಂಡರ ಮನವಿ ಹಿನ್ನೆಲೆಯಲ್ಲಿ ರೈತ ಹೋರಾಟಗಾರರ ಮೇಲಿನ ಮೊಕದ್ದಮೆಗಳ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದ ಬಿಎಸ್ವೈ ಇಂದು ಸಂಜೆ ಒಳಗೆ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.  

ಉತ್ತರ ಕರ್ನಾಟಕದ ಸೇರಿ ಪ್ರವಾಹದಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಹಾಗೂ ಬೆಳೆ ನಾಶ  ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ ಬೆಳೆ ನಾಶವಾಗಿರುವ ರೈತರಿಗೆ ಸೂಕ್ತ ಪರಿಹಾರ ಸರ್ಕಾರ ನೀಡುವಂತೆ ಮನವಿ ರೈತ ಮುಖಂಡರು ಮನವಿ ಮಾಡಿದ್ದಾರೆ.