ಸಿಎಂ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಭೂ ಸ್ವಾಧೀನ , ಪರಿಹಾರ ಕುರಿತು ಅಂತಿಮ ನಿರ್ಣಯ: ರಮೇಶ್ ಜಾರಕಿಹೊಳಿ
ಬೆಂಗಳೂರು, ಮೇ 6,ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಕಾಯ್ದೆ 2013 ರಂತೆ ಪರಿಹಾರ ನೀಡಲು ಚರ್ಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಭೂ ಸ್ವಾಧೀನ ಮತ್ತು ಪರಿಹಾರ ಕುರಿತು ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಕುರಿತಾದ ಉನ್ನತ ಮಟ್ಟದ ಸಭೆಯ ನಂತರ ಮಾತನಾಡಿದ ಸಚಿವರು, ಶೀಘ್ರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.ಉನ್ನತ ಮಟ್ಟದ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಾನೂನು ಸಚಿವ ಮಾಧುಸ್ವಾಮಿ, ಜವಳಿ ಸಚಿವ ಶ್ರೀಮಂತ ಪಾಟೀಲ್, ತೋಟಗಾರಿಕೆ ಸಚಿವ ನಾರಾಯಣ ಗೌಡ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 