ಇಂದು 1250 ಕೋಟಿರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಶಂಕುಸ್ಥಾಪನೆಗೆ
CM to lay foundation stone for development projects worth Rs 1250 crore today
ವಿಜಯನಗರ(ಹೊಸಪೇಟೆ) 08: ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರುತುಂಬಿಸುವ ಯೋಜನೆ ಸೇರಿ ವಿವಿಧಅಭಿವೃದ್ಧಿ ಯೋಜನೆಗಳ ಲೋಕಾರೆ್ಣ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಉದ್ಘಾಟನೆಗೆ ನ.9 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ಹಿನ್ನಲೆಯಲ್ಲಿಕೂಡ್ಲಿಗಿ ಪಟ್ಟಣದಲ್ಲಿ ಬೃಹತ್ ವೇದಿಕೆ ನಿರ್ಮಾಣದ ಭರದ ಸಿದ್ದತೆಯನ್ನು ಕೈಗೊಳ್ಳಲಾಗಿದೆ ಎಂದುಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಪಟ್ಟಣದಗುಡೇಕೋಟೆರಸ್ತೆಯ ಶಾಸಕರಕಚೇರಿ ಬಳಿ ಬೃಹತ್ ವೇದಿಕೆ ನಿರ್ಮಾಣದ ಪೂರ್ವಸಿದ್ದತೆಯ ಪರೀಶೀಲನೆ ನಡೆಸಿ ಶುಕ್ರವಾರಅವರು ಸುದ್ದಿಗಾರರೊಂದಿಗೆ ಮಾತನಾಡಿದರು, ಸುಮಾರು ನಾಲ್ಕು ದಶಕಗಳಿಂದ ನೆನಗುದಿಗೆ ಬಿದ್ದಿದ್ದ ಅನೇಕ ರೈತಪರ ಯೋಜನೆಗಳ ಅನುಷ್ಟಾನಗೊಳ್ಳುತ್ತಿರುವುದು ಕ್ಷೇತ್ರದಜನತೆಗೆ ಸಂತಸತಂದಿದೆ.ಹಿಂದಿನ ಶಾಸಕರಾದಎನ್.ವೈ.ಗೋಪಾಲಕೃಷ್ಣರವರಅವಧಿಯಲ್ಲಿಕ್ಷೇತ್ರದಲ್ಲಿ ನೀರಾವರಿಅಭಿವೃದ್ಧಿಗಾಗಿಕೆರೆತುಂಬಿಸುವ ಯೋಜನೆಗೆ 2021 ರಲ್ಲಿ ಸುಮಾರು 710 ಕೋಟಿ ರೂಗಳ ಅನುದಾನ ಬಿಡುಗಡೆ ಮಾಡಲಾಗಿತ್ತು.ಶೇ.90 ರಷ್ಟುಕಾಮಗಾರಿ ಪ್ರಗತಿಯಲ್ಲಿದ್ದಾಗ ಕೆಲವು ತಾಂತ್ರಿಕ ಸಮಸ್ಯೆಗಳು ತಲೆದೋರಿದ್ದವು ಅವುಗಳನ್ನು ಪರಿಹರಿಸಲಾಗಿದೆ.ಇದೀಗ ಪರೀಕ್ಷಾರ್ಥವಾಗಿ ಪರೀಶೀಲನೆ ನಡೆಸಲಾಗಿದೆ.ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಲೋಕಾರೆ್ಣಗೆಆಗಮಿಸುತ್ತಿದ್ದಾರೆ. ಹಿಂದುಳಿದ ಕೂಡ್ಲಿಗಿತಾಲೂಕಿನ ಸಮಸ್ಯೆಗಳನ್ನು ಅರಿತು ಸುಮಾರು 1250 ಕೋಟಿರೂಗಳ ಅನುದಾನ ನೀಡಿಕ್ಷೇತ್ರದ ಸಮಗ್ರಅಭಿವೃದ್ಧಿಗೆ ಸಹಕರಿಸಿದ್ದಾರೆ.ಕ್ಷೇತ್ರದಲ್ಲಿಕೃಷಿಕರಿಗೆ ಕೃಷಿ ವಿಜ್ಞಾನಕೇಂದ್ರ, ಜಿಲ್ಲಾ ಕೃಷಿ ತರಬೇತಿಕೇಂದ್ರ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲುಅಗತ್ಯ ನೀಡಲಾಗಿದೆ.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಅನೇಕ ಪ್ರಮುಖ ಸಚಿವರುಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿಜಿಲ್ಲೆ ಹಾಗೂ ತಾಲೂಕಿನಿಂದಜನರು ಆಗಮಿಸಲು 600 ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜಿಸಿ ಸಾರಿಗೆ ವ್ಯವಸ್ಥೆ ಅನುಕೂಲ ಮಾಡಲಾಗಿದೆ.ಅಂದಾಜು 50 ಸಾವಿರಜನರು ಸೇರುವ ನೀರೀಕ್ಷೆಇದೆ.ಸರ್ಕಾರದ ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರತ್ಯೇಕವಾಗಿ ಮಳಿಗೆಗಳನ್ನು ನಿರ್ಮಿಸಿ ವಸ್ತು ಪ್ರದರ್ಶನವನ್ನುಆಯೋಜಿಸಲಾಗಿದೆ.ವೇದಿಕೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಣೆ ಮಾಡಲಾಗುವುದು.ಕಾರ್ಯಕ್ರಮಕ್ಕೆ ಬರುವಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುದ್ಧಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಗಾಳಿ, ಬೆಳಕು, ಎಲ್‌ಇಡಿ ಪರದೆಗಳಲ್ಲಿ ವೇದಿಕೆ ಕಾರ್ಯಕ್ರಮದ ವೀಕ್ಷಣೆ ಸೇರಿದಂತೆ ಸವಿಭೋಜನದ ವ್ಯವಸ್ಥೆಯನ್ನುಅಚ್ಚುಕಟ್ಟಾಗಿ ನಿರ್ವಹಿಸಲಾಗುವುದು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಕಾರದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿಜನತೆ ಆಗಮಿಸಿ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ. ಪಟ್ಟಣದಗ್ರಾಮದೇವತೆ ಶ್ರೀಊರಮ್ಮ ದೇವಸ್ಥಾನದಿಂದ ಸುಮಾರು 100 ಕ್ಕೂ ಹೆಚ್ಚು ಜನ ಸುಮಂಗಲಿಯರು ಪೂರ್ಣಾಕುಂಭ ಹೊತ್ತು ಸಕಲ ಮಂಗಳ ವಾದ್ಯಗಳ ಮೂಲಕ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಲಿದ್ದಾರೆ.ಈ ನೀರಾವರಿ ಹೋರಾಟದಲ್ಲಿ ಭಾಗಿಯಾದ ಹೋರಾಟಗಾರರಿಗೆ ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಗುವುದುಎಂದು ಮಾಹಿತಿ ನೀಡಿದರು.ಈ ವೇಳೆ ಜಿಲ್ಲಾಧಿಕಾರಿಕವಿತಾಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ನೋಂಗ್ಜಾಯ್ ಮೊಹಮ್ಮದ್‌ಅಕ್ರಮ್ ಅಲಿ ಷಾ, ಅಪರಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಹೊಸಪೇಟೆ ಸಹಾಯಕಆಯುಕ್ತ ಪಿ.ವಿವೇಕಾನಂದ, ಹರಪನಹಳ್ಳಿ ಸಹಾಯಕಆಯುಕ್ತಚಿದಾನಂದಗುರುಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 