ಸೆ.1ರಂದು ಗದಗ ಜಿಲ್ಲೆಗೆ ಸಿಎಂ ಭೇಟಿ: ಬರ ಪರಿಸ್ಥಿತಿ ಪರೀಶೀಲನೆ

ಸೆ.1ರಂದು ಗದಗ ಜಿಲ್ಲೆಗೆ ಸಿಎಂ ಭೇಟಿ: ಬರ ಪರಿಸ್ಥಿತಿ ಪರೀಶೀಲನೆ  CM to visit Gadag district on Sept. 1: To review drought situation


ಗದಗ, ಆ.30: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆ.1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಅವಲೋಕನ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ತಿಳಿಸಿದ್ದಾರೆ.  

ಶನಿವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸೆ.1ರಂದು ಹುಬ್ಬಳ್ಳಿಯಿಂದ ಗದಗಕ್ಕೆ ಆಗಮಿಸುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರೀಶೀಲಿಸಿ, ನಂತರ ಲಕ್ಷ್ಮೇಶ್ವರಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.  

ಜಿಲ್ಲೆ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದ ಅಗತ್ಯ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದರು.