ಮುಖ್ಯಮಂತ್ರಿ ದೆಹಲಿ ಪ್ರವಾಸ: ಜೆಡಿಎಸ್, ಕಾಂಗ್ರೆಸ್ ಟೀಕೆ
ಬೆಂಗಳೂರು, ಆ 7 ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿ ಜನರು ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಂಡು ಜನಹಿತ ಮರೆತಿದ್ದಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಟೀಕಿಸಿದೆ.
ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಅದರಲ್ಲೂ ಉತ್ತರ ಕನರ್ಾಟಕದ ಭಾಗದಲ್ಲಿ ಅತಿವೃಷ್ಟಿಯಿಂದ ಜನರು ನರಳುತ್ತಿದ್ದಾರೆ. ಇದುವರೆಗೂ ಸರ್ಕಾರ ಗಂಜಿ ಕೇಂದ್ರಗಳನ್ನು ಸ್ಥಾಪಿಸಿಲ್ಲ, ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಿಲ್ಲ. ಮುಖ್ಯಮಂತ್ರಿ ಇಲ್ಲ, ಮಂತ್ರಿಗಳೂ ಇಲ್ಲ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಾಧ್ಯವಾದಷ್ಟು ಜನರಿಗೆ ಸಹಾಯ ಮಾಡಲು ಕೋರಲಾಗಿದೆ ಎಂದು ಜೆಡಿಎಸ್ ಟ್ವಿಟ್ ಮಾಡಿದೆ.
ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಕರ್ನಾಟಕದಲ್ಲಿ ಸಮಸ್ಯೆ ಹೇಳಿಕೊಳ್ಳಲು ಮಂತ್ರಿಮಂಡಲವೂ ಇಲ್ಲ. ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ.. ಎಂದು ಜೆಡಿಎಸ್ ಮತ್ತೊಂದು ಟ್ವೀಟ್ ನಲ್ಲಿ ಕುಟುಕಿದೆ.
ಕರ್ನಾಟಕ ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗಿದ್ದು, ಕರ್ನಾಟಕ ನೀರಿನಲ್ಲಿ ಮುಳುಗಿದೆ. ಮತದಾರರು ಕಣ್ಣೀರಿನಲ್ಲಿ ಮುಳುಗಿದ್ದಾರೆ. ಬಿಜೆಪಿ, ಆರ್ ಎಸ್ ಎಸ್ ನವರು ಅಧಿಕಾರ ಹಂಚಿಕೆಯ ಕಿತ್ತಾಟದಲ್ಲಿ ಮುಳುಗುದ್ದಾರೆ ಎಂದು ಟೀಕಿಸಿದೆ.
ಮಾಧ್ಯಮದವರು ಕಾಶ್ಮೀರದಲ್ಲಿ ಮುಳುಗಿದ್ದಾರೆ. ಏಕವ್ಯಕ್ತಿಯ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಯುತ್ತಿರಿ, ರಾಜ್ಯ ಸರ್ಕಾರ ಶವವಾಗಿ ತೇಲಲಿದೆ ಎಂದು ಟ್ವೀಟರ್ ನಲ್ಲಿ ಕಾಂಗ್ರೆಸ್ ಹೇಳಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 