ಮೀಸಲಾತಿ ತೀರ್ಪಿನ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹುನ್ನಾರ ನಡೆಸಿವೆ; ಬಿಎಸ್ ಪಿ ಆರೋಪ

ಬೆಂಗಳೂರು,ಫೆ.14 :  ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಖಂಡನಿಯವಾಗಿದ್ದು, ಮೀಸಲಾತಿ ದುರ್ಬಲಗೊಳಿಸುವ ಸಂಚಿನ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹುನ್ನಾರ ನಡೆಸುತ್ತಿದೆ ಎಂದು ಬಹುಜನ ಸಮಾಜ ಪಾರ್ಟಿ ಆರೋಪಿಸಿದೆ.ಸುದ್ದಿಗೋಷ್ಠಿಯಲ್ಲಿ ಪಾರ್ಟಿಯ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಮಾತನಾಡಿ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದ ಖಂಡನೀಯ. ಇಂತಹ ಮೀಸಲಾತಿ ವಿರೋಧಿ ತೀರ್ಪು ನಿಲ್ಲಬೇಕಾದರೆ ಹೈಕೋರ್ಟ್ ಮತ್ತು ಸುಪ್ರಿಂ ಕೋರ್ಟ್ ನ್ಯಾಯಾಧೀಶರ ನೇಮಕಾತಿಯಲ್ಲಿ ಮೀಸಲಾತಿ ತರಬೇಕು ಎಂದು ಆಗ್ರಹಿಸಿದರು.ಈ ತೀರ್ಪು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ತೀರ್ಪು ಇತ್ತೀಚಿನ ಕೆಲ ವರ್ಷಗಳಿಂದ ಆರ್ ಎಸ್ ಎಸ್ ನ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಬಿಜೆಪಿ ಸಂಸದರು ಅನುಸರಿಸುತ್ತಿರುವ ಮೀಸಲಾತಿ ವಿರೋಧಿ ನೀತಿಗೆ ಪೂರಕವಾಗಿದೆ. ಇದೆಲ್ಲವನ್ನೂ ನೋಡಿದರೆ ಮೀಸಲಾತಿ ವಿರುದ್ದ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.ಕೇಂದ್ರ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟೀನ ತೀರ್ಪಿನ ಕುರಿತು ಮೇಲ್ಮನವಿ ಸಲ್ಲಿಸಿ ಸೂಕ್ತ ಕ್ರಮ ವಹಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.ಯುಎನ್ಐ ಡಿಸಿ ವಿಎನ್