ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿ: ಎಚ್.ಕೆ.ಕುಮಾರಸ್ವಾಮಿ ಬೇಸರ

ಬೆಂಗಳೂರು ಮಾ 13, ಕೊರೋನಾ ವೈರಸ್ ಗೆ ರಾಜ್ಯದಲ್ಲಿಯೇ ಮೊದಲು ಬಲಿಯಾಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಕೊರೋನಾದಿಂದ ಮೃತಪಟ್ಟಿರುವ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ತಡವಾಗಿ ಈ ಮಾಹಿತಿ ನೀಡಿದೆ. ಈ ರೀತಿ ತಡವಾಗಿ ಮಾಹಿತಿ ನೀಡಿರುವುದು ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಆರೋಗ್ಯ ಇಲಾಖೆ ಸಭೆ ನಡೆಸಿ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.  ಪ್ರತಿದಿನ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.