ಕೊರೊನಾ ಸೋಂಕು : ಚೀನಾದ ಹುಬೈ ಪ್ರಾಂತ್ಯದಲ್ಲಿ ಮತ್ತೆ 116 ಬಲಿ

ವುಹಾನ್, ಫೆ 14, ಚೀನಾದ ಹುಬೈ ಪ್ರಾಂತ್ಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕಿಗೆ ಮತ್ತೆ 116 ಜನರು ಬಲಿಯಾಗಿದ್ದು ಕಳೆದ 24 ಗಂಟೆಗಳಲ್ಲಿ ಸಾವಿನ ಸಂಖ್ಯೆ 1426 ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.  ಸೋಂಕಿತರ ಸಂಖ್ಯೆ 51,986 ಕ್ಕೆ ಏರಿಕೆಯಾಗಿದೆ.   ಡಿಸೆಂಬರ್ ಅಂತ್ಯದ ವೇಳೆಗೆ ಕೊರೊನಾ ವೈರಾಣು ಸೋಂಕು ಮೊದಲ ಬಾರಿಗೆ ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡಿತು. ಇದೀಗ 20 ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ. ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.