ಶಿರಹಟ್ಟಿಯಲ್ಲಿ ಕೋಟ್ಪಾ ಕಾಯ್ದೆ ಜಾರಿ: ತಂಬಾಕು ಮಾರಾಟಗಾರರಿಗೆ ದಂಡ
COTPA Act enforced in Shirahatti: Fines for tobacco sellers
ಗದಗ 23: ಶಿರಹಟ್ಟಿ ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕಾಗಿ ಕೋಟ್ಪಾ ಕಾಯ್ದೆ-2003 ಅಡಿ ವಿಶೇಷ ದಾಳಿ ನಡೆಸಿ, ನಿಯಮ ಉಲ್ಲಂಘಿಸಿದ ವ್ಯಾಪಾರಿಗಳಿಗೆ ?3,200 ದಂಡ ವಿಧಿಸಲಾಯಿತು. ಜುಲೈ 22ರಂದು ತಹಶೀಲ್ದಾರ್ ರಾಗವೇಂದ್ರರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ತಂಬಾಕು ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಕುರಿತು ವ್ಯಾಪಾರಿಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಯಿತು.
ಕೋಟ್ಪಾ ಕಾಯ್ದೆಯ ಸೆಕ್ಷನ್ 6(ಬಿ) ಪ್ರಕಾರ ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ಆದರೂ ಕೆಲ ಅಂಗಡಿಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಅವುಗಳಿಗೆ ದಂಡ ವಿಧಿಸಿ, ಮುಂದಿನ ದಿನಗಳಲ್ಲಿ ನಿಯಮ ಪಾಲಿಸುವಂತೆ ಸೂಚಿಸಲಾಯಿತು.
ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಅಪಾಯವಿದೆ ಎಂದು ತಿಳಿಸಿದರು. ಪರೋಕ್ಷ ಧೂಮಪಾನವೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಎಲ್ಲರೂ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದರು.
ಹೋಟೆಲ್, ಬಾರ್, ರೆಸ್ಟೋರೆಂಟ್ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು. ಶಾಲಾ-ಕಾಲೇಜುಗಳ ಸುತ್ತಮುತ್ತ ತಂಬಾಕು ಮಾರಾಟ ಮುಂದುವರಿಸಿದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಾಗವೇಂದ್ರರಾವ್ ಎಚ್ಚರಿಕೆ ನೀಡಿದರು.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಡಾ. ಪವನ್ ಪಾಯದೆ, ಪೊಲೀಸ್ ಇಲಾಖೆಯ ಎಂ.ಎನ್. ಅಯ್ಯನಗೌಡರ್, ಎಎಸ್‌ಐ, ಪಟ್ಟಣ ಪಂಚಾಯಿತಿಯ ಎಂ.ಎಚ್. ನಾಯ್ಕರ್, ಸಾಮಾಜಿಕ ಕಾರ್ಯಕರ್ತೆ ಬಸವಮ್ಮ ಚಿತ್ತರಗಿ, ಆರೋಗ್ಯ ಇಲಾಖೆಯ ಗೀರೀಶ್, ವೀರನಗೌಡರ್, ರಮೇಶ್ ಎಸ್. ಮಹೇಶ್, ಕಾರ್ಮಿಕ ಇಲಾಖೆಯ ಅಭಿನಂದನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 