ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಗೆ : ಸಿ.ಆರ್‌. ಮುಂಡರಗಿ ಚಾಲನೆ

CR Mundaragi launches mass housing construction work under Mahatma Gandhi NREGA scheme

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಗೆ : ಸಿ.ಆರ್‌. ಮುಂಡರಗಿ ಚಾಲನೆ 

ಗದಗ 01 :- ಗದಗ ತಾಲೂಕಿನ ಅಂತೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್‌. ಮುಂಡರಗಿ ಚಾಲನೆ ನೀಡಿದರು. ನರೇಗಾ ಯೋಜನೆಯ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ/ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಎಂಬ ಶೀರ್ಷಿಕೆಯಡಿ ಏಪ್ರಿಲ್ 01 ರಿಂದ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿಯೊಬ್ಬ ನೋಂದಾಯಿತ ಕೂಲಿಕಾರರಿಗೆ ನಿರಂತರವಾಗಿ 100 ದಿನಗಳ ಕೆಲಸ ಪಡೆಯುವ ಅವಕಾಶ ಹೊಂದಿದ್ದು ನಮೂನೆ - 6 ರಲ್ಲಿ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ ಕೆಲಸ ಪಡೆಯಬಹುದು ಹಾಗೂ ಪ್ರಸ್ತುತ ಆರ್ಥಿಕ ವರ್ಷ ಕೂಲಿ ಮೊತ್ತದಲ್ಲಿ ಭಾರಿ ಏರಿಕೆ ಕಂಡಿದ್ದು 349 ರೂ ಗಳಿದ್ದ ಕೂಲಿ ಮೊತ್ತ 370 ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಚೀಟಿಯ ಮಹತ್ವ, ದೊರೆಯುವ ಸೌಲಭ್ಯವನ್ನು ಪಡೆಯಲು ನಿಯಮಾನುಸಾರ ಕೂಲಿ ಕಾರ್ಮಿಕರು ಕೆಲಸ ನಿರ್ವಹಣೆ ಮಾಡಬೇಕು, ಗಂಡು ಮತ್ತು ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು, ಅಳತೆಗೆ ತಕ್ಕಂತೆ ಕೆಲಸ ನಿರ್ವಹಣೆ ಮಾಡಿದರೆ ಮಾತ್ರ ಪೂರ್ಣ ಪ್ರಮಾಣದ ಕೂಲಿ ಮೊತ್ತ ಲಭ್ಯವಾಗುತ್ತದೆ ಎಂದು ತಿಳಿಸಿದರು.ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀ. ಪ್ರಕಾಶಗೌಡ ಪಾಟೀಲ ಮಾತನಾಡಿ ಯೋಜನೆಯಡಿ ಪ್ರತಿ ಕೂಲಿಕಾರ್ಮಿಕರಿಗೆ ಜಾಬ್ ಕಾರ್ಡ್‌ ವಿತರಿಸಿ ವಾರ್ಷಿಕ 100 ಮಾನವ ದಿನಗಳ ಕೂಲಿ ಕೆಲಸ ನೀಡಲಾಗುತ್ತದೆ. ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಎರೆ ಹುಳು ಘಟಕ, ದನದ ಕೊಟ್ಟಿಗೆ ಮುಂತಾದ ಕಾಮಗಾರಿಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಸಹಾಯಕ ನಿರ್ಧೇಶಕ ಶ್ರೀ. ಕುಮಾರ ಪೂಜಾರ ಮಾತನಾಡಿ ಯೋಜನೆಯ ಸಮರ​‍್ಕ ಅನುಷ್ಠಾನದಲ್ಲಿ ಈಗ ಅಪ್ಲಿಕೇಶನ್ ಗಮನ ಸೆಳೆದಿದೆ. ಕೇಂದ್ರ ಸರ್ಕಾರ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (ಓಒಒಖ) ಅಪ್ಲಿಕೇಶನ್ ಕಡ್ಡಾಯಗೊಳಿಸಿದೆ ಇದರಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಹಾಜರಾತಿಗಳನ್ನು ಜಿಯೋ ಟ್ಯಾಗ್ ಫೋಟೋಗ್ರಾಫ ಮುಖಾಂತರ ಪ್ರತಿ ದಿನ ಎರಡು ಬಾರಿ ಕಡ್ಡಾಯವಾಗಿ ಸೆರೆಹಿಡಿಯಲು ಸೂಚಿಸಿದರು. ಪಂಚಾಯತ ಅಭಿವೃದ್ದಿ ಅಧಿಕಾರಿ ಶ್ರೀ. ಎಚ್‌. ಎಸ್ ಚಟ್ರಿ ಮಾತನಾಡಿ ಗ್ರಾಮೀಣ ಪ್ರದೇಶದ ಬಡವರಿಗೆ, ಶ್ರಮಿಕರಿಗೆ ನರೇಗಾ ಯೋಜನೆಯು ಒಂದು ವರದಾನವಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ, ಜೊತೆಗೆ ಸಮಾನ ಕೆಲಸ. ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ತೃತೀಯ ಲಿಂಗಿಗಳಿಗೂ ಕೆಲಸ ನೀಡಲಾಗುತ್ತಿದೆ ಎಂದರು.ಸದರ ಕಾಮಗಾರಿ ಸ್ಥಳದಲ್ಲಿ ಸಹಾಯಕ ಜಿಲ್ಲಾ  ಸಮನ್ವಯ ಅಧಿಕಾರಿ ಕಿರಣ ಕುಮಾರ, ತಾಲೂಕು ಐ.ಇ.ಸಿ ಸಂಯೋಜಕ ವಿರೇಶ, ತಾಂತ್ರಿಕ ಸಹಾಯಕ ಪ್ರದೀಪ, ನರೇಗಾ ಸಿಬ್ಬಂದಿಗಳು, ಕಾಯಕ ಬಂಧುಗಳು, ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.