ಸಿ.ಟಿ.ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರಕರಣ: ದೂರು ಪರಿಶೀಲಿಸಿ ಮ ಕೈಗೊಳ್ಳಲಾಗುವುದು: ಹೊರಟ್ಟಿ

CT Ravi, Minister Lakshmi Hebbalkar case: Complaint will be investigated and action will be taken: H

ದಾವಣಗೆರೆ 29: ಸದನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ವಿಧಾನಪರಿಷತ್‌ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಭಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದರು.