ವಾಷಿಂಗ್ ಟನ್, ನ 15 : ದಕ್ಷಿಣ ಕ್ಯಾಲಿಫೋರ್ನಿಯಾದ ಲಾಸ್ ಏಂಜಲಿಸ್ ನಲ್ಲಿ ಸೌಜಸ್ ಪ್ರೌಢಶಾಲೆಯ ಮೇಲೆ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದ್ದು ಇಬ್ಬರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. 16 ವರ್ಷದ ಬಾಲಕಿ ಗುಂಡಿನ ದಾಳಿಗೆ ಬಲಿಯಾಗಿದ್ದಳು. ಗಾಯಗೊಂಡ ಇತರ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯಲ್ಲಿ ಸಿಸಿಟಿವಿ ಕ್ಯಾಮೆರಾದಲ್ಲಿ ಓರ್ವ ವಿದ್ಯಾರ್ಥಿ ತನ್ನ ಬ್ಯಾಗ್ ನಿಂದ ಗನ್ ತೆಗೆದು ತನ್ನನ್ನು ಕೊಂದುಕೊಳ್ಳುವ ಮುನ್ನ ಇತರ ಐವರು ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿರುವುದು ಪತ್ತೆಯಾಗಿದೆ.