ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕರೆ
ಗದಗ 19: ಗದಗ ತಾಲೂಕಿನ ನಿರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ ಗ್ರಾಮ ಸಂಪರ್ಕ ಯೋಜನೆ ಅಡಿಯಲ್ಲಿ ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಗಳ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಎಫ್.ಕೋಲಕಾರ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು. ಸಹಶಿಕ್ಷಕ ಎಸ್.ಸಿ.ಪೊಲೀಸ್ ಪಾಟೀಲ ಮಾತನಾಡಿ ಸರ್ಕಾರದಲ್ಲಿ ಮಕ್ಕಳಿಗಾಗಿ ವಿವಿಧ ಜನಪರ ಯೋಜನೆಗಳಿದ್ದು ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವುದು ಪಾಲಕರ ಆದ್ಯ ಕರ್ತವ್ಯ. ಪೋಷಕರು ಮಕ್ಕಳಿಗೆ ಶಿಕ್ಷಣವನ್ನು ನೀಡಿ ಅವರಲ್ಲಿ ಜ್ಞಾನವೆಂಬ ಬೀಜ ಮೊಳಕೆಯೊಡೆಯುವಂತೆ ಮಾಡಬೇಕು ಎಂದರು.
ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣುರು ಬೀದಿ ನಾಟಕ ಮತ್ತು ಗಾಣ ತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ಜಾನಪದ ಸಂಗೀತ ತಂಡದವರು ಶಾಲೆಯ ಸ್ವಚ್ಛತೆ ಹಾಗೂ ಸರಕಾರದ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಸಹಶಿಕ್ಷಕರಾದ ಪಿ.ಬಿ.ಮುಧೋಳಮಠ, ಎ.ಎಂ.ಹಾದಿಮನಿ, ಪ್ರವೀಣ ಮಡಿವಾಳರ, ವಿಜಯ ಕಿರೇಸೂರು, ಎಂ.ಎಚ್.ಹುಲಗುರ, ಶಿಕ್ಷಕಿಯರಾದ ಎಲ್.ಡಿ.ಜಂತ್ಲಿ, ವಾರ್ತಾ ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾಥರ್ಿಗಳು ಇದ್ದರು
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 