‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
Call for entries for the ‘Prof. H.T. Pote Manuscript’ and ‘Beragu’ book awards
ವಿಜಯಪುರ 03 : ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆಯ ವತಿಯಿಂದ ನೀಡಲಾಗುವ ‘ಪ್ರೊ. ಎಚ್.ಟಿ. ಪೋತೆ ವಿಮರ್ಶೆ ಹಸ್ತಪ್ರತಿ’ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ದಿ. ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ನೀಡುವ ‘ಬೆರಗು ಪುಸ್ತಕ ಪ್ರಶಸ್ತಿ–2025’ಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ. ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಮುದ್ರಣಕ್ಕೆ ಸಿದ್ಧವಾಗಿರುವ ವಿಮರ್ಶೆ ಮತ್ತು ವಿಚಾರ ಸಾಹಿತ್ಯಕ್ಕೆ ಸಂಬಂಧಿಸಿದ ಹಸ್ತಪ್ರತಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು. ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಟೈಪ್ ಮಾಡಿದ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದು. ಆಸಕ್ತರು ಹಸ್ತಪ್ರತಿಯ ಎರಡು ಪ್ರತಿಗಳನ್ನು ವಿಜಯಲಕ್ಷ್ಮೀ ರಮೇಶ ಕತ್ತಿ, ಪ್ರಕಾಶಕರು, ಬೆರಗು ಪ್ರಕಾಶನ ಸಂಸ್ಥೆ, ವಿನಾಯಕ ನಗರ, ಆಲಮೇಲ–586202, ವಿಜಯಪುರ ಜಿಲ್ಲೆ ವಿಳಾಸಕ್ಕೆ ಅಕ್ಟೋಬರ್ 10ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊ. 7795341335 ಸಂಪರ್ಕಿಸಬಹುದು.
‘ಬೆರಗು ಪುಸ್ತಕ ಪ್ರಶಸ್ತಿ–2025’ಕ್ಕೆ 2025ನೇ ಸಾಲಿನಲ್ಲಿ ಪ್ರಕಟವಾದ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳ ಕೃತಿಗಳನ್ನು ಸಲ್ಲಿಸಬಹುದು. ಪ್ರಶಸ್ತಿಯು ₹5 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪಿಎಚ್.ಡಿ. ಪ್ರಬಂಧಗಳು ಹಾಗೂ ಸಂಪಾದಿತ ಕೃತಿಗಳನ್ನು ಹೊರತುಪಡಿಸಿ ಕನ್ನಡದಲ್ಲಿ ಪ್ರಕಟವಾದ ಎಲ್ಲ ಪ್ರಕಾರದ ಪುಸ್ತಕಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಆಸಕ್ತ ಲೇಖಕರು ತಮ್ಮ ಕೃತಿಯ ಎರಡು ಪ್ರತಿಗಳನ್ನು ಅಕ್ಟೋಬರ್ 10ರೊಳಗೆ ಸಲ್ಲಿಸಬೇಕು ಎಂದು ಬೆರಗು ಪ್ರಕಾಶನದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 