ಸಹಕಾರ ಚಳವಳಿ ಬಲಪಡಿಸಲು ಎಲ್ಲರ ಸಹಕಾರಕ್ಕೆ ಕರೆ
Call for everyone's cooperation to strengthen the cooperative movement
ಲೋಕದರ್ಶನ ವರದಿ
ಗದಗ 30: ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಇತರೆ ಸಹಕಾರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 29ರಿಂದ ಜುಲೈ 6ರವರೆಗೆ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ.
ಸಪ್ತಾಹದ ಅಂಗವಾಗಿ ಮಲ್ಲಸಮುದ್ರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಹಕಾರ ಸಂಘಗಳ ಬಲವರ್ಧನೆ, ಡಿಜಿಟಲೀಕರಣ, ಪಾರದರ್ಶಕ ಆಡಳಿತ, ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ರೈತರು, ಮಹಿಳೆಯರು ಮತ್ತು ಗ್ರಾಮೀಣ ಜನರ ಆರ್ಥಿಕ ಸಬಲೀಕರಣ ಕುರಿತು ಅರಿವು ಮೂಡಿಸಲಾಯಿತು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಸ್.ಕೆ. ಕುರಡಗಿ ಮಾತನಾಡಿ, ಸಹಕಾರ ಸಂಘಗಳು ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಾವಲಂಬನೆಗೆ ಪ್ರಮುಖ ಪಾತ್ರವಹಿಸುತ್ತಿದ್ದು, ಎಲ್ಲರೂ ಸಹಕಾರ ಚಳವಳಿಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿರ್ದೇಶಕ ನಾಗರಾಜ ದೇಶಪಾಂಡೆ, ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಆರ್. ನಿಡಗುಂದಿ ಸೇರಿದಂತೆ ಅಧಿಕಾರಿಗಳು ವಿವಿಧ ಯೋಜನೆಗಳು, ಡಿಜಿಟಲ್ ವ್ಯವಸ್ಥೆ ಹಾಗೂ ಸಹಕಾರ ಸಂಘಗಳ ಕಾರ್ಯಕ್ಷಮತೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ಸದಸ್ಯರು ಭಾಗವಹಿಸಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 