ಕಿಸಾನ್ ಸಮ್ಮಾನ್ ನೋಂದಣಿಗೆ ರೈತರಿಗೆ ಕರೆ

ಕಾರವಾರ ; ರೈತರು ತಮ್ಮ ಆದಾಯ ವೃದ್ಧಿಸಿಕೊಳ್ಳಲು ಕೇಂದ್ರ ಸಕರ್ಾರದ ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕಾರವಾರ ತಹಸೀಲ್ದಾರ್ ಆರ್.ವಿ.ಕಟ್ಟಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕುರಿತು ಕಾರವಾರಲ್ಲಿ ಬುಧವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಲಾಭದಾಯಕವಾಗಿದ್ದು ಅರ್ಹ ರೈತರು ತಮ್ಮ ಸಮೀಪದ ಗ್ರಾಮ ಪಂಚಾಯ್ತಿ, ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ನಾಡಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರದಲ್ಲಿ ಆಧಾರ ಕಾಡರ್ು, ಬ್ಯಾಂಕ್ ಪಾಸ್ಬುಕ್ ಹಾಗೂ ಸ್ವಯಂ ದೃಢೀಕರಣಪತ್ರದೊಂದಿಗೆ ತಮ್ಮ ಹೆಸರನ್ನು ನೋಂದಾಯಿಸುವಂತೆ ತಿಳಿಸಿದರು.

ಕಿಸಾನ್ ಸಮ್ಮಾನ್ ಯೋಜನೆಗೆ ಈ ಹಿಂದೆ ಇದ್ದ 2 ಹೆಕ್ಟೇರ್ ಕ್ಷೇತ್ರದ ಮಿತಿಯನ್ನು ತೆಗೆದು ಹಾಕಲಾಗಿದ್ದು ರೈತರು ಈ ಯೋಜನೆಯ ಲಾಭ ಪಡೆಯುವಂತೆ ಅವರು ಕೋರಿದ್ದಾರೆ.

ಸಭೆಯಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿವರ್ಾಹಕ ಅಧಿಕಾರಿ ಡಾ.ಆನಂದ್, ಸಹಾಯಕ ಕೃಷಿ ನಿದರ್ೇಶಕ ಗುಡಿಗಾರ್ ಉಪಸ್ಥಿತರಿದ್ದರು. ತಾಲೂಕಿನ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗೆ ರೈತರ ನೋಂದಣಿ ಕುರಿತಂತೆ ತರಬೇತಿ ನೀಡಲಾಯಿತು.