ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ

ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ  Call for nationwide bank strike


ಬೆಳಗಾವಿ ಸೆ.11: ವಾರಕ್ಕೆ ಐದು ದಿನ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್‌ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ.  

ಇದರ ಅಂಗವಾಗಿ ಬೆಳಗಾವಿ ಜಿಲ್ಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಶುಕ್ರವಾರ ಮುಷ್ಕರ ನಡೆಸಿದರು. ಬ್ಯಾಂಕ್ಗಳ ಏಕಪಕ್ಷೀಯ ಪಿಎಲ್‌ಐ ಯೋಜನೆ ಹಿಂಪಡೆಯಬೇಕು ಅಥವಾ ಯೂನಿಯನ್ಗಳೊಂದಿಗೆ ಚರ್ಚಿಸಿ ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.  

2024ರ ಮಾರ್ಚ್‌ 8ರಂದು ನಡೆದ ದ್ವಿಪಕ್ಷೀಯ ಒಪ್ಪಂದದಲ್ಲಿ ವಾರಕ್ಕೆ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒಪ್ಪಿಗೆ ನೀಡಲಾಗಿತ್ತು. ಆದರೆ ಎರಡು ವರ್ಷ ಕಳೆದರೂ ಈ ಕುರಿತು ಸರ್ಕಾರದಿಂದ ಅಂತಿಮ ನಿರ್ಧಾರವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಪಿಂಚಣಿ ಪರಿಷ್ಕರಣೆ, ಪಿಂಚಣಿದಾರರಿಗೆ ಸಮಾನ ಡಿಎ, ಎನ್ಪಿಎಸ್ನಲ್ಲಿರುವ ನೌಕರರಿಗೆ ಒಪಿಎಸ್ ಆಯ್ಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.  

ಮುಷ್ಕರದ ಅಂಗವಾಗಿ ಬೆಳಗಾವಿಯ ಧರ್ಮವೀರ ಸಂಭಾಜಿ ಚೌಕ್ನಿಂದ ಕಿಲೋಸ್ಕರ್ ರಸ್ತೆ, ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ ಮೂಲಕ ಮೆರವಣಿಗೆ ನಡೆಸಿ ಧರ್ಮವೀರ ಸಂಭಾಜಿ ಚೌಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು.  ಬೇಡಿಕೆಗಳು ಈಡೇರದಿದ್ದರೆ ಸೆ.28ರಿಂದ 30ರವರೆಗೆ ಮತ್ತೆ ಮುಷ್ಕರ ಹಾಗೂ ಅ.26ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬ್ಯಾಂಕ್ ಯೂನಿಯನ್ಗಳು ಎಚ್ಚರಿಕೆ ನೀಡಿವೆ.