ಜನಗಣತಿ ಯಶಸ್ಸಿಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ
ಹಾವೇರಿ25: ದೇಶದ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಅತ್ಯಂತ ಮಹತ್ವವಾದ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಚಾಜರ್್ ಅಧಿಕಾರಿಗಳು ಸಮರ್ಥವಾಗಿ ತರಬೇತಿಯನ್ನು ಪಡೆದು ಜಿಲ್ಲೆಯಲ್ಲಿ ಜನಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಕರೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಗಣತಿ ಚಾರ್ಜ ಅಧಿಕಾರಿಗಳಿಗೆ ಆಯೋಜಿಸಲಾದ ಎರಡು ದಿನಗಳ ತರಬೇತಿ ಕಾಯರ್ಾಗಾರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ಎ. 15 ರಂದು ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯ ಹಾಗೂ ಎನ್.ಪಿ.ಆರ್. ಮಾಹಿತಿ ಇಂದಿಕರಣ ಪ್ರಕ್ರಿಯೆ ಆರಂಭವಾಗಲಿದೆ. ಈ ಭಾರಿ ಡಿಜಿಟಲ್ ಮಾದರಿಯಲ್ಲಿ ಆಪ್ಗಳ ಮೂಲಕ ಮಾಹಿತಿ ಸಂಗ್ರಹಣೆ ನಡೆಯಲಿದ್ದು, ಎಲ್ಲಾ ಚಾಜರ್್ ಅಧಿಕಾರಿಗಳು ಕೈಪಿಡಿ ಹಾಗೂ ಆಪ್ಗಳನ್ನು ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಕಾಯರ್ಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವಾರ, ಜನಗಣತಿ ನಿದರ್ೆಶನಾಲಯದ ಮಾಸ್ಟರ್ ಟ್ರೈನರ್ ಮಂಜುನಾಥ್ ಮತ್ತು ಚೇತನ್, ಉಪವಿಭಾಗಾಧಿಕಾರಿಗಳು, ತಹಶೀಲ್ದಾರಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು. ಅರವಿಂದ ಐರಣಿ ಅವರು ಕಾರ್ಯಕ್ರಮ ನಿರ್ವಹಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 