ಸ್ವಸ್ಥ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ: ಪ್ರಮೋದ ಹೆಚ್.ಜಿ.
Call on students to build a healthy society: Pramod H.G.
ಧಾರವಾಡ 26 : ವಿದ್ಯಾರ್ಥಿಗಳು ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಹಾಗೂ ಮಾದಕ ವಸ್ತುಗಳ ಬಳಕೆ ಮತ್ತು ಅದರ ಜಾಲದಿಂದ ದೂರ ಇರಬೇಕೆಂದು ಧಾರವಾಡ ವಿದ್ಯಾಗಿರಿ ಪೋಲಿಸ್ ಠಾಣೆಯ ಪೋಲಿಸ್ ಸಬ್ ಇನ್ಸಪೆಕ್ಟರ್ ಪ್ರಮೋದ ಹೆಚ್.ಜಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಮಾಳಮಡ್ಡಿಯ ಕೆ.ಇ.ಬೋರ್ಡಿನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿ, ಮಾದಕ ವಸ್ತುಗಳ ಸೇವನೆಗೆ ಒಂದು ಸಲ ಸಿಕ್ಕಿಬಿದ್ದರೆ ತಪ್ಪಿಸಿಕೊಳ್ಳುವುದು ಕಷ್ಟ. ಇಂದು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಈ ಚಟಕ್ಕೆ ಬಲಿಯಾಗುತ್ತಿದ್ದಾರೆ. ಡ್ರಗ್ಸ್ ಸೇವನೆಯಿಂದ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ.ಮದ್ಯವೆಸನಿಗಳು ಚಾಕು ಇರಿತ, ಕೊಲೆ, ಸುಲಿಗೆ ಅತ್ಯಾಚಾರ ಇತ್ಯಾದಿ ಸಮಾಜಘಾತಕ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ವಿದ್ಯಾರ್ಥಿಗಳು ಮಾದಕವಸ್ತುಗಳಿಂದ ದೂರ ಇರಬೇಕು ಹಾಗೂ ಒಳ್ಳೆಯ ಸಮಾಜ ನಿರ್ಮಾಣ ಕಾರ್ಯದಲ್ಲಿ ಪೋಲಿಸರ ಜೊತೆ ಕೈ ಜೋಡಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮಹಾವಿದ್ಯಾಲಯದ ಪ್ರಾಚಾರ್ಯೆ ಸುನೀತಾ ಕಡಪಟ್ಟಿ ಮಾತನಾಡಿ, ಸಮಾಜದಲ್ಲಿ ಹಾಗೂ ನಿಮ್ಮ ಸುತ್ತಮುತ್ತಲಿನ ಜನರಿಗೆ ಮಾದಕ ವಸ್ತುವಿನ ಸೇವನೆಯ ದುಷ್ಟರಿಣಾಮದ ಬಗ್ಗೆ ತಿಳುವಳಿಕೆ ನೀಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹಿರಿಯ ಉಪನ್ಯಾಸಕ ಎಸ್.ಎಲ್. ಶೇಖರಗೋಳ ಮಾತನಾಡಿ, ಮಾದಕವಸ್ತುಗಳ ಬಳಕೆಯ ದುಷ್ಟಪರಿಣಾಮ ಕುರಿತು ಹಾಗೂ ಮಾದಕವಸ್ತುಗಳ ಬಳಕೆಯ ನಿಯಂತ್ರಣದಲ್ಲಿ ಪೋಲಿಸರ ಪಾತ್ರದ ಬಗ್ಗೆ ತಿಳಿಸಿದರು. ಮಾದಕ ವಸ್ತು ವಿರೋಧ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾಗಿರಿ ಪೋಲಿಸ್ ಠಾಣೆಯ ಪೋಲಿಸ್ ಸಬ್ ಇನ್ಸಪೆಕ್ಟರ್ ಎಮ್.ಅರ್. ಮಲ್ಲಿಗವಾಡ, ಎಸ್.ಎಚ್. ಸಾಳುಂಕೆ ಉಪನ್ಯಾಸಕರಾದ ಹೇಮಲತಾ ಕರಿಗಾರ, ಹನಮಂತಪ್ಪ ಕಳಸಪ್ಪನವರ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 