ಗದಗ: ಸೆಪ್ಟೆಂಬರ್ 13 ರಂದು ಗಣೇಶ ಚತುಥರ್ಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕೆಂದು ಗದಗ ಜಿಲ್ಲಾಧಿಕಾರಿ ಮನೋಜ್ ಜೈನ್ ನುಡಿದರು.
ಅವರಿಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳ ನಿಷೇಧದ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ರಸಾಯನಿಕ ಬಣ್ಣಲೇಪಿತ ಗಣೇಶ ವಿಗ್ರಹಗಳನ್ನು ತಯಾರಿಸಿ ಜಲ ಮೂಲಗಳಲ್ಲಿ ವಿಸಜರ್ಿಸುವುದನ್ನು ಈಗಾಗಲೇ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಣೇಶ ಮೂತರ್ಿ ತಯಾರಕರು ಜೇಡಿ ಮಣ್ಣಿನ ಸಣ್ಣ ಗಾತ್ರದ ಗಣೇಶ ಮೂತರ್ಿಗಳನ್ನು ಮಾತ್ರ ತಯಾರಿಸಬೇಕು. ರಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹ ವಿಸರ್ಜನೆಯಿಂದ ವಿಷಯುಕ್ತ ಜಲದಿಂದ ಜಲಚರ ಮೂಲಗಳಿಗೆ ಹಾನಿಯುಂಟಾಗುತ್ತದೆ. ಯಾವ ಕಾರಣಕ್ಕೂ ಇಂತಹ ವಸ್ತುಗಳಿಂದ ಗಣೇಶ ಮೂತರ್ಿಗಳನ್ನು ನಿಮರ್ಿಸದಿರಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ಗಣೇಶ ವಿಗ್ರಹಗಳನ್ನು ತಯಾರು ಮಾಡದಂತೆ ನೋಡಕೊಳ್ಳುವುದು ಮತ್ತು ಮಾರಾಟ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ವ್ಯಾಪಾರ್ ಲೈಸನ್ಸ್ ನ್ನು ನೀಡದಿರಲು, ಯಾವುದೇ ಲೈಸನ್ಸ್ನ್ನು ಪಡೆಯದೇ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುತ್ತಿರುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಕಾನೂನು ಕ್ರಮ ತಕ್ಷಣ ಜರುಗಿಸಲಾಗುವುದು. ಬೇರೆ ಜಿಲ್ಲೆಗಳಿಂದ ಗದಗ ಜಿಲ್ಲೆಗೆ ತರುವ ಪ್ಲಾಸ್ಟರ್ ಆಫ್ ಪ್ಯಾರೀಸ ಗಣೇಶ ವಿಗ್ರಹಗಳನ್ನು ತಡೆಯಲು ಮತ್ತು ವಾಪಸ್ಸು ಕಳುಹಿಸುವ ಜವಾಬ್ದಾರಿಯನ್ನು ಎಲ್ಲ ಗಡಿ ಠಾಣೆಯ/ ಚೆಕ್ ಪೋಸ್ಟರ್ ಅಧಿಕಾರಿಗಳು ಕಡ್ಡಾಯವಾಗಿ ವಹಿಸಬೇಕಾಗುತ್ತದೆ. ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರರು ಈ ಕುರಿತು ಸಭೆಯನ್ನು ಜರುಗಿಸಲು ಜಿಲ್ಲಾಧಿಕಾರಿ ನಿದರ್ೇಶನ ನೀಡಿದರು.
ಗಣೇಶ ವಿಸರ್ಜನಾ ಸ್ಥಳ ನಿಗದಿ, ಸಾರ್ವಜನಿಕ ಗಣೇಶ ವಿಸರ್ಜನೆಗೆ ಸಮನ್ವಯ ಸಮಿತಿ ರಚನೆ, ಸ್ಥಳೀಯ ಸಂಸ್ಥೆಗಳು ಕೂಡ ಪರಿಸರ ಸ್ನೇಹಿ ಗಣೇಶ ಹಬ್ಬದ ಕುರಿತು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು , ಲೈಸನ್ಸ್ ಪಡೆಯದ ತಯಾರಕರ ವಿರುದ್ಧ ಕಾನೂನು ಕ್ರಮ ಜರುಗಿಸುವ ಕುರಿತು ಸಭೆಯಲ್ಲಿ ಚಚರ್ಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ಎಸ್.ಎನ್. ರುದ್ರೇಶ, ತಹಶೀಲ್ದಾರರುಗಳು, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಬಿ. ರುದ್ರೇಶ, ಗಣೇಶ ಮೂತರ್ಿ ತಯಾರಕರು, ವಿವಿಧ ಇಲಾಖೆ ಅಧಿಕಾರಿಗಳು, ಉಪಸ್ಥಿತರಿದ್ದರು.