ಬೆಂಕಿ ಅವಘಡಗಳಾದಾಗ ತುರ್ತಾಗಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ: ವೆಂಕಟೇಶ್
Call the fire station immediately in the event of a fire accident: Venkatesh
ಶಿಗ್ಗಾವಿ, ಆ.12: ಮನೆಯಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಅಥವಾ ಬೆಂಕಿ ಅವಘಡ ಸಂಭವಿಸಿದಾಗ ಸಾರ್ವಜನಿಕರು ತಕ್ಷಣ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬೇಕು ಎಂದು ಠಾಣಾಧಿಕಾರಿ ವೆಂಕಟೇಶ್ ಹೇಳಿದರು.
ತಾಲೂಕಿನ ಚಾಕಾಪುರ ಗ್ರಾಮದ ಏಕಲವ್ಯ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಶಿಗ್ಗಾವಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಅಗ್ನಿ ಸುರಕ್ಷತೆ ಕುರಿತು ತರಬೇತಿ ಕಾರ್ಯಾಗಾರದ ಪ್ರಾತ್ಯಕ್ಷಿಕೆಯಲ್ಲಿ ಅವರು ಮಾತನಾಡಿದರು.
ಬೆಂಕಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಕೆಲವರು ಮೊಬೈಲ್ ಮೂಲಕ ಸೆಲ್ಫಿ ಅಥವಾ ವಿಡಿಯೊ ಚಿತ್ರೀಕರಣ ಮಾಡುವುದರಲ್ಲಿ ತಲ್ಲೀನರಾಗುತ್ತಾರೆ. ಆದರೆ, ಅಪಾಯದಲ್ಲಿರುವವರಿಗೆ ನೆರವಾಗಲು ಮುಂದೆ ಬರುವುದಿಲ್ಲ. ಆದ್ದರಿಂದ ಇಂತಹ ಸಂದರ್ಭದಲ್ಲಿ ಮೊದಲು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.
ಅಲ್ಲದೆ, ಮನೆಯಲ್ಲಿ ಗ್ಯಾಸ್ ಸಿಲಿಂಡರ್ಗಳು ಹಾಗೂ ಗೀಸರ್ಗಳನ್ನು ರಾತ್ರಿ ಮಲಗುವ ಸಂದರ್ಭದಲ್ಲಿ ಸುರಕ್ಷಿತವಾಗಿ ಇಟ್ಟುಕೊಂಡು ಮುನ್ನೆಚ್ಚರಿಕೆ ವಹಿಸಬೇಕು. ಬೆಂಕಿ ಅವಘಡ ಸಂಭವಿಸಿದರೆ ತಕ್ಷಣ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ, ಹೆಚ್ಚಿನ ಅನಾಹುತ ತಪ್ಪಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಆಡಳಿತಾಧಿಕಾರಿ ಡಾ. ಶಿವು ಹಾವೇರಿ ಮಾತನಾಡಿ, ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡರೆ ಕೂಡಲೇ ಅಗ್ನಿಶಾಮಕ ಠಾಣೆಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡುವ ಮೂಲಕ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಾದ ಮಹೇಶ ಕೆಂಗೇರಿ, ಪ್ರಶಾಂತ ಬಾಕಿ ಹಾಗೂ ಅಮೀತ್ ಶಿರಮೋಜಿ ಅವರು ಅಗ್ನಿ ಅವಘಡದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಗಾಯತ್ರಿ ದೈವಜ್ಞ ವಹಿಸಿದ್ದರು. ಶಿಕ್ಷಕ ಮಾರುತಿ ಸ್ವಾಗತಿಸಿದರು. ಶಿಕ್ಷಕಿ ಜಯಶ್ರೀ ಹಾಗಲೂರು ವಂದಿಸಿದರು. ಶಿಕ್ಷಕಿ ಶೃತಿ ಬೆಳಗಲಿ ಕಾರ್ಯಕ್ರಮ ನಿರ್ವಹಿಸಿದರು. ಶಾಲೆಯ ಶಿಕ್ಷಕರು, ಪಾಲಕರು, ಮಕ್ಕಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 