ಕಾರ್ಯಕರ್ತರಿಗೆ ಸಂಘಟನಾ ಬಲವರ್ಧನೆಗೆ ಕರೆ
Call to activists to strengthen their organization
ಬೆಳಗಾವಿ 15: ನಗರದ ಧರ್ಮನಾಥ ಭವನದ ಹತ್ತಿರವಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಘಟನಾತ್ಮಕ ಸಭೆಗೆ ಮುಖಂಡರು ಚಾಲನೆ ನೀಡಿದರು. ಬಿಜೆಪಿ ಸಂಘಟನಾತ್ಮಕ ಸಭೆಯನ್ನು ಉದ್ದೇಶಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಭೈರತಿ ಬಸವರಾಜ ಭಾಗವಹಿಸಿ ಮುಂಬರುವ ಪಕ್ಷದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ನಂತರ ಮಾತನಾಡಿದ ಅವರು ಪಕ್ಷ ನೀಡುವ ಪ್ರತಿಯೊಂದು ಕಾರ್ಯಕ್ರಮಗಳನ್ನು ಮುಖಂಡರು, ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಹೋಗಿ ಪಕ್ಷದ ಕಾರ್ಯಕರ್ತರಿಗೆ ತಿಳಿಸಿ ಸಕ್ರೀಯವಾಗಿ ಪಕ್ಷದ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಯಲ್ಲಿ ಭಾಗವಹಿಸಿ 2028ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಾವುಟ ಹಾರಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ವಿಭಾಗ ಪ್ರಭಾರಿಗಳಾದ ಸಂಜಯ ಪಾಟೀಲ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಸುರೇಶ ಮಾರಿಹಾಳ, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 