ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ಸಾಂಸ್ಕೃತಿಕ ಅರಿವು ಬೆಳೆಸಲು ಕರೆ
Call to instill patriotism and cultural awareness among students
ರಾಯಬಾಗ 30 : ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಬಜೀರಾವ್ ಮಗದುಮ್ಮ ಪ್ರೌಢಶಾಲೆಯಲ್ಲಿ 2026ಹಿ27 ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕನ್ನಡ ಉಪನ್ಯಾಸಕ ಎಲ್.ಟಿ. ಬಬ್ಬಲಿ ಅವರು, ವಿದ್ಯಾರ್ಥಿಗಳು ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಶ್ರದ್ಧೆಯಿಂದ ಅಧ್ಯಯನ ಮಾಡಿ ಉತ್ತಮ ಸಾಧನೆ ಮಾಡಬೇಕೆಂದು ಹೇಳಿದರು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಾಯಕವಾಗುತ್ತದೆ ಎಂದು ಅವರು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಈರಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಿನೇಶ್ವರ ಮಗದುಮ್ಮ, ಕಾರ್ಯದರ್ಶಿ ಎ.ಟಿ. ಕೂಗೇ, ಸದಸ್ಯರಾದ ಆರಿ್ಬ. ಪಾಟೀಲ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೇಯಾ ಕಾಮಗೌಡ ಸ್ವಾಗತಿಸಿದರು, ಸಂದ್ಯಾ ಮುಚ್ಚಂಡಿ ನಿರೂಪಿಸಿದರು ಮತ್ತು ಪ್ರತಿಕ್ಷಾ ನಿಡಸೋಸಿ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 