125 ದಿನಗಳ ಕೆಲಸ ಪಡೆಯಲು ಕೂಲಿಕಾರರಿಗೆ ಕರೆ
Call to laborers to avail 125 days of work
ಗಜೇಂದ್ರಗಡ, ಸೆ.3: ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಎಂಜಿಎನ್ಆರಿ್ಜಎಸ್) 125 ದಿನಗಳ ಕೆಲಸ ಪಡೆಯಲು ಕೂಲಿಕಾರರು ನಿಯಮಿತವಾಗಿ ಕೆಲಸ ಮಾಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.
ನಿಡಗುಂದಿ ಗ್ರಾಮದ ಹೊಸ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ನಡೆದ ವಿವಿಧ ಐಇಸಿ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿದ ದಿನಗಳವರೆಗೆ ಕೂಲಿಕಾರರು ಕೆಲಸ ನಿರ್ವಹಿಸಿದರೆ ನಿರಂತರವಾಗಿ ಉದ್ಯೋಗ ದೊರೆಯಲಿದೆ. ವೈಯಕ್ತಿಕ ಕಾಮಗಾರಿಗಳ ಪ್ರಯೋಜನವನ್ನೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಿಡಗುಂದಿ ಗ್ರಾಮದ ಹೊಸ ಕೆರೆ ಪುನಶ್ಚೇತನಕ್ಕಾಗಿ ಎಂಜಿಎನ್ಆರಿ್ಜಎಸ್ ಯೋಜನೆಯಡಿ ಅಂದಾಜು ?90 ಲಕ್ಷ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕೂಲಿಕಾರರು ಸಮರ್ಕವಾಗಿ ಕೆಲಸ ನಿರ್ವಹಿಸಿ ಕೆರೆಯನ್ನು ಅಭಿವೃದ್ಧಿಪಡಿಸಿದರೆ ತಾಲೂಕಿಗೆ ಮಾದರಿ ಕೆರೆಯಾಗಲಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 