ಯುವಕರನ್ನು ‘ಭಾರತ್ ಜೋಡೋ ಯುವ ಸಂಘ’ದಲ್ಲಿ ನೋಂದಾಯಿಸಲು ಕರೆ
Call to register youth in 'Bharat Jodo Yuva Sangh'
ಲೋಕದರ್ಶನ ವರದಿ
ವಿಜಯಪುರ 22: ಯುವಕರನ್ನು ಸಂಘಟಿಸಿ, ಅವರ ಶಕ್ತಿ, ಪ್ರತಿಭೆ ಹಾಗೂ ನಾಯಕತ್ವ ಗುಣಗಳನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ ಯೋಜನೆ ರೂಪಿಸಲಾಗಿದೆ. ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಯುವಕರು ಸಂಘದಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದರು.
ತಿಕೋಟಾ ತಾಲ್ಲೂಕಿನ ತೊರವೀ ಗ್ರಾಮ ಪಂಚಾಯಿತಿಗೆ ಶುಕ್ರವಾರ ಭೇಟಿ ನೀಡಿದ ಅವರು, ‘ಭಾರತ್ ಜೋಡೋ ಯುವ ಸಂಘ’ದ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘದ ನೋಂದಣಿ ಪ್ರಕ್ರಿಯೆ, ಯೋಜನೆಯ ಉದ್ದೇಶ, ಯುವಕರಿಗೆ ದೊರೆಯುವ ಅವಕಾಶಗಳು ಹಾಗೂ ಸಂಘದ ಮೂಲಕ ಕೈಗೊಳ್ಳಬಹುದಾದ ವಿವಿಧ ಸಾಮಾಜಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಯುವಶಕ್ತಿಯನ್ನು ಸಮುದಾಯದ ಅಭಿವೃದ್ಧಿಯೊಂದಿಗೆ ಜೋಡಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಸಾಮಾಜಿಕ ಸಾಮರಸ್ಯ, ಪರಿಸರ ಸಂರಕ್ಷಣೆ, ಕ್ರೀಡೆ, ಆರೋಗ್ಯ, ಕೌಶಲಾಭಿವೃದ್ಧಿ, ಸ್ವಚ್ಛತೆ, ಜಲ ಸಂರಕ್ಷಣೆ ಹಾಗೂ ಜನಜಾಗೃತಿ ಕಾರ್ಯಕ್ರಮಗಳಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಹೇಳಿದರು.
ಯುವಕರು ಯೋಜನೆಯ ಫಲಾನುಭವಿಗಳಾಗುವುದಕ್ಕಿಂತ ಗ್ರಾಮೀಣಾಭಿವೃದ್ಧಿ ಮತ್ತು ಸಾಮಾಜಿಕ ಪರಿವರ್ತನೆಯಲ್ಲಿ ಸಕ್ರಿಯ ಪಾಲುದಾರರಾಗಬೇಕು. ವಿವಿಧ ಜಾತಿ, ಧರ್ಮ ಹಾಗೂ ಸಮುದಾಯಗಳ ಯುವಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮೂಲಕ ಸೌಹಾರ್ದ, ಸಹೋದರತ್ವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ‘ಭಾರತ್ ಜೋಡೋ ಯುವ ಸಂಘ’ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶ್ರೀ ತುಂಗಾಳ, ಸಿಬ್ಬಂದಿ ಹಾಗೂ ಯುವಕರು ಉಪಸ್ಥಿತರಿದ್ದರು. ಇದೇ ವೇಳೆ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯಕ್ಕೂ ಭೇಟಿ ನೀಡಿ ಪರೀಶೀಲಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 