ಪಿಎಂಜೆಜೆಬಿವೈ ಮತ್ತು ಪಿಎಂಎಸ್‌ಬಿವೈ ಅನುಷ್ಠಾನಕ್ಕಾಗಿ ಗ್ರಾಪಂ ಮಟ್ಟದಲ್ಲಿ ಅಭಿಯಾನ
ಬಳ್ಳಾರಿ 10: ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ನೇತೃತ್ವದಲ್ಲಿ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿರವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳೀಯ ಬ್ಯಾಂಕುಗಳೊಂದಿಗೆ ಪ್ರಧಾನಮಂತ್ರಿ ಜನ್ ಜೀವನ್ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ರಾಜ್ಯ ಮಟ್ಟದಲ್ಲಿ ಸಕ್ರಿಯ ನೋಂದಣಿಗಳನ್ನು ಹೆಚ್ಚಿಸುವ ಸಲುವಾಗಿ ಜಿಲ್ಲಾ ಲೀಡ್ ಬ್ಯಾಂಕ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತಯರ ಸಹಯೋಗದೊಂದಿಗೆ ಈ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಅಭಿಯಾನ ಆಯೋಜಿಸುತ್ತಾರೆ ಎಂದು ಹೇಳಿದ್ದಾರೆ.
ಮುಂಬರುವ ಎರಡು ತಿಂಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಎರಡು ಯೋಜನೆಗಳಲ್ಲಿ ಪ್ರತಿ ಪಂಚಾಯಿತಿಯಲ್ಲೂ ಕನಿಷ್ಠ 150ಕ್ಕೂ ಹೆಚ್ಚಿನ ನೋಂದಣಿಗಳನ್ನು ಮಾಡಿಸುವ ಉದ್ದೇಶ ಹೊಂದಲಾಗಿದೆ.
ಆಯಾ ಗ್ರಾಪಂ ನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಅರ್ಹ ವ್ಯಕ್ತಿಗಳನ್ನು ಜನಸುರಕ್ಷಾ ಯೋಜನೆಗಳಡಿ ನೋಂದಾಯಿಸಕೊಳ್ಳುವಂತೆ ಸೂಚಿಸಬೇಕು. ಬ್ಯಾಂಕರುಗಳ ಸಮಿತಿಗೆ ಪೂರ್ಣ ಸಹಯೋಗ ಮತ್ತು ಅಭಿಯಾನದ ಯಶಸ್ಸಿಗಾಗಿ ಪ್ರಗತಿ ಪರೀಶೀಲಿಸಬೇಕು ಹಾಗೂ ಸೂಕ್ತ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.