ಲೋಕದರ್ಶನ ವರದಿ
ಖಾನಾಪೂರ08: ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ಟೊಪ್ಪಿಗೆ ಚಳುವಳಿ ಯಿಂದ ಮತದಾನ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಖಾನಾಪೂರ ಪಟ್ಟಣದಲ್ಲಿ ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ಟೊಪ್ಪಿಗೆ ಚಳುವಳಿ ಮತ್ತು ದೇಸೀ ಉಡುಗೆಯಲ್ಲಿ ಕಾಲ್ನಡಿಗೆಯ ಮೂಲಕ ಮತದಾನ ಜಾಗೃತಿ ಅಭಿಯಾನ ದಿಂದ ಮೂಡಿಸಲಾಯಿತು. ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕಾ ಪಂಚಾಯತಿ ಕಾರ್ಯನಿವರ್ಾಹಕ ಅಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಅವರ ನೇತೃತ್ವದಲ್ಲಿ ನಡೆದ ಈ ಜಾಥಾದಲ್ಲಿ ತಾಶೀಲ್ದಾರ ವಿದ್ಯಾಧರ ಗುಳಗುಳಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಮೂದಲಿಕೆ ಶಿವಸ್ಮಾರಕ ವೃತ್ತದಲ್ಲಿ ಮಾನವ ಸರಪಳಿ ನಿಮರ್ಿಸಿ ಮತದಾನ ಮಾಡಲು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಘೊಷಣಿಗಳನ್ನು ಹಾಕುತ್ತಾ ಜಾಗೃತಿ ಮೂಡಿಸಿದರು. ನಂತರ ಪಟ್ಟಣದ ಬೀದಿ-ಬೀದಿಗಳಲ್ಲಿ ಸಂಚರಿಸಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದರು. ಈ ಸಂದರ್ಭದಲ್ಲಿ ಖಾನಾಪೂರ ತಾಲೂಕಾ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ನೌಕರರ ಸಂಘ,ಬೆಳಗಾವಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಆನಂದ ಬಿಂಗೆ ಪಿಡಿಒ ಗಳಾದ ಗಣೇಶ, ಪ್ರಭಾಕರ ಭಟ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಈ ಜಾತಾ ಯಶಸ್ವಿಗೆ ಶ್ರಮಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ವರ್ಗ ತಲೆಯ ಮೇಲೆ ಟೊಪ್ಪಿಗೆ ಹಾಕಿ ಮತ್ತು ದೇಸೀ ಉಡುಗೆಯಲ್ಲಿ ಜಾಗೃತಿ ಮೂಡಿಸುವುದು ವಿಶೇಷವಾಗಿತ್ತು.