ಪಾಲಿಟೆಕ್ನಿಕ್ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ಕ್ಯಾಂಪಾಸ್ ಸಂದರ್ಶನ
Campus interview held at Polytechnic College
ಲೋಕದರ್ಶನ ವರದಿ
ರಾಯಬಾಗ 12: ಕಾಲೇಜ್ ಕ್ಯಾಂಪಾಸ್‌ಗಳಲ್ಲಿ ನಡೆಯುವ ಸಂದರ್ಶನಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶ ಎಂದು ರೇಣುಕಾ ಶುಗರ್ಸ ಜನರಲ್ ಮ್ಯಾನೇಜರ್ ಸಂಗಮನಾಥ ಜಾಮದಾರ ಹೇಳಿದರು.
ಶನಿವಾರ ರಾಯಬಾಗ ಪಾಲಿಟೆಕ್ನಿಕ್ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ಕ್ಯಾಂಪಾಸ್ ಸಂದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಂತ್ರಿಕ ಶಿಕ್ಷಣ ಪಡೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಥಳೀಯ ಕಂಪನಿಗಳಲ್ಲಿ ಉದ್ಯೋಗ ಪಡೆದರೆ ತಮ್ಮ ಪಾಲಕರನ್ನು ಚೆನ್ನಾಗಿ ನೋಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು.
ಫುಕೊಕು ಕಂಪನಿ ಬೆಳಗಾವಿ ಘಟಕದ ಎಚ್.ಆರ್ ಸಿದ್ದಪ್ಪ ರೆಂಟೆ ಮಾತನಾಡಿ, ನಮ್ಮ ಕಂಪನಿ ದೇಶದ ವಿವಿಧ ಭಾಗಗಳಲ್ಲಿ ಘಟಕಗಳನ್ನು ಹೊಂದಿದೆ. ಸ್ಥಳೀಯವಾಗಿ ಬೆಳಗಾವಿಯಲ್ಲಿ ಘಟಕ ಇದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಪಡೆಯಲು ಸಾಧ್ಯವಾಗಿದೆ. ಕಂಪನಿ ಒಳ್ಳೆಯ ವೇತನದ ಜೊತೆಗೆ ಎಲ್ಲ ಸೌಲಭ್ಯಗಳು ನೀಡುತ್ತಿದೆ ಎಂದರು.
ಪ್ರಾಚಾರ್ಯ ಬಿ.ಎಸ್.ದಡ್ಡಿ, ಸಂಜಯ ಕೀಲ್ಲೆದಾರ, ಅಲ್ಲಪ್ಪ ತಳವಾರ, ಮೇರಿ, ಅರುಣ ಪೋಳ, ಎಮ್.ಆರ್.ಜೇಡರ, ರಾಜನ ಅನ್ವೇಕರ, ಸಿ.ಕೆ.ಒಡೆಯರ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 