ಕಾಲುವೆ ಆಧುನೀಕರಣಕ್ಕೆ ಚಾಲನೆ: ರೈತರಿಗೆ ನೀರಿನ ಸೌಲಭ್ಯ ಹೆಚ್ಚಳ
Canal modernization launched: Increased water availability for farmers
ಲೋಕದರ್ಶನ ವರದಿ
ಯರಗಟ್ಟಿ 04 : ಈ ಭಾಗದ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಮತ್ತಷ್ಟು ಸುಲಭವಾಗುವ ಉದ್ದೇಶದಿಂದ ಕಾಲುವೆ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ಮಬನೂರ ಗ್ರಾಮದಲ್ಲಿ ಮಂಗಳವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಮಲಪ್ರಭಾ ಎಡದಂಡೆ ಕಾಲುವೆಯ ಹಂಚು ಕಾಲುವೆ 4, 5 ಮತ್ತು 6ರ ಆಧುನೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
4.95 ಕೋಟಿ ವೆಚ್ಚದ ಕಾಮಗಾರಿಯನ್ನು ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸಬೇಕು. ಇದರಿಂದ ರೈತರ ಜಮೀನುಗಳಿಗೆ ನೀರು ತಲುಪಲು ಅನುಕೂಲವಾಗಲಿದೆ ಎಂದು ಹೇಳಿದರು.
ಗ್ರಾಮಸ್ಥರ ಬೇಡಿಕೆಯಂತೆ ಮಬನೂರ ಕ್ರಾಸ್ನಿಂದ ಮದೂರ್ ಗ್ರಾಮದವರೆಗೆ ರಸ್ತೆ ಅಗಲೀಕರಣ ಹಾಗೂ ಬೀದಿ ದೀಪಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಕಾಂಗ್ರೆಸ್ ಮುಖಂಡ ಆರ್.ಕೆ. ಪಟಾತ್ ಮಾತನಾಡಿ, ರೈತರ ಬಹುದಿನಗಳ ಬೇಡಿಕೆಯಾಗಿದ್ದ ಕಾಲುವೆ ದುರಸ್ತಿ ಕಾಮಗಾರಿಗೆ ಚಾಲನೆ ದೊರೆತಿರುವುದು ಸಂತಸದ ವಿಷಯವಾಗಿದೆ. ಕಾಲುವೆಯ ಕೊನೆಯ ಭಾಗದ ರೈತರಿಗೂ ನೀರು ಒದಗಿಸುವ ಗುರಿ ಹೊಂದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಪುಂಡಲೀಕ ಮೇಟಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬಗಿ, ಗ್ರಾಪಂ ಮಾಜಿ ಸದಸ್ಯ ಯಲ್ಲಪ್ಪ ನರಿ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 