ಕಾಲುವೆ ನೀರು ಜಮೀನುಗಳಿಗೆ ನುಗ್ಗಿ ತೋಗರಿ ಬೆಳೆ ಹಾನಿ
Canal water floods farmlands, damaging the red gram crop
ದೇವರಹಿಪ್ಪರಗಿ 27 : ತಾಲ್ಲೂಕಿನ ಸಾತಿಹಾಳ ಗ್ರಾಮದ ಸಮೀಪವಿರುವ ವಿಜಯಪುರ ಮೇನ್ ಕಾಲುವೆಯ ಉಪಕಾಲುವೆ ಒಡೆದು ನೀರು ಕೃಷಿ ಜಮೀನುಗಳಿಗೆ ನುಗ್ಗಿ ತೋಗರಿ ಬೆಳೆ ಹಾನಿಗೊಳಗಾದ ಘಟನೆ ಗುರುವಾರ ನಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಬೆಳೆ ಹಾನಿಗೆ ಕಾರಣ ಎಂದು ರೈತರು ಆರೋಪಿಸಿದ್ದಾರೆ. ಪಟ್ಟಣದ ಸ.ನಂ-109/2 ರೈತರಾದ ಮಾಂತೇಶ ಪರ್ಪ ಅವಟಿ ಹಾಗೂ ನಿಂಗಪ್ಪ ಸತ್ಯಪ್ಪ ಅವಟಿ ಅವರ ಸುಮಾರು 17 ಎಕರೆ ಜಮೀನಿನಲ್ಲಿ 10ಎಕರೆ ಜಮೀನ ತೊಗರಿ ಬೆಳೆಯಲಾಗಿತ್ತು. ಕಾಲುವೆ ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ನೀರು ಕಾಲುವೆಯಿಂದ ಹೊರಹೊಮ್ಮಿ ಕೃಷಿ ಜಮೀನುಗಳಿಗೆ ನುಗ್ಗಿದೆ.
ಪರಿಣಾಮವಾಗಿ ಸುಮಾರು 5 ಎಕರೆ ತೋಗರಿ ಬೆಳೆ ನಾಶವಾಗಿದೆ. ಮೊದಲೇ ಬರಗಾಲದಿಂದ ತತ್ತರಿಸಿದ ರೈತರಿಗೆ ಬರ ಸಿಡಿಲು ಬಡಿದಂತಾಗಿದೆ. ರೈತರು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಬೆಳೆದಿದ್ದ ಬೆಳೆ ನೀರಿನಿಂದ ಹಾನಿಯಾಗಿದೆ. ಕೆಬಿಜೆಎನ್‌ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹಾನಿಗೊಳಗಾದ ಬೆಳೆಗಳ ತಕ್ಷಣ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವ ಮುಖಂಡರಾದ ಮಹೇಶ ಅವಟಿ ಹಾಗೂ ರೈತರು ಒತ್ತಾಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 