ಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆ ಸಾಧ್ಯ
Cancer can be prevented by a healthy lifestyle
ವಿಜಯಪುರ 11: ಕ್ಯಾನ್ಸರ್ ಪ್ರಕರಣಗಳ ಹೆಚ್ಚಳಕ್ಕೆ ಜೀವನಶೈಲಿಯ ಬದಲಾವಣೆ, ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಪರಿಸರ ಅಂಶಗಳು ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಆಹಾರ ಪದ್ಧತಿ ಅನುಸರಿಸುವುದು,ನಿಯಮಿತ ವ್ಯಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮಗಳು ಮತ್ತು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ಅರ್ಚನಾ ಕುಲಕರ್ಣಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ-ಕರ್ನಾಟಕ ಇವರ ಸಹಯೋಗದಲ್ಲಿ ಫೆ. 09ರಂದು ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.
ಡಾ.ಗುರುರಾಜ ಕುಲಕರ್ಣಿ ಅವರು ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್‌ನ ಕಾರಣಗಳು, ಲಕ್ಷಣಗಳು ಹಾಗೂ ತಪಾಸಣಾ ವಿಧಾನಗಳ ಕುರಿತು ಮಾತನಾಡಿದರು. ದೈಹಿಕ ಚಟುವಟಿಕೆಗಳಳಿಂದ ಕೂಡಿದ ಜೀವನ ಅಳವಡಿಸಿಕೊಂಡಿದ್ದಾದರೆ ಬಹುತೇಕ ರೋಗಗಳನ್ನು ನಿಯಂತ್ರಿಸಲು ಸಾಧ್ಯ.ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಯೋಗ, ನಡಿಗೆ, ಓಟ, ಈಜು ಸೇರಿದಂತೆ ವಿವಿಧ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳಬೇಕು. ದಿನನಿತ್ಯ ಆರೋಗ್ಯಕರ ಆಹಾರ ಸೇವನೆ ಕ್ಯಾನ್ಸರ್ ಅಪಾಯವನ್ನು ತಗ್ಗಿಸಲು ನೆರವಾಗುತ್ತದೆ ಎಂದರು. ಜನ ಜಾಗೃತಿಜಾಥಾ ಗಾಂಧಿಚೌಕ ಮಾರ್ಗವಾಗಿ ಸಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಅಶ್ವಿನಿ ಹಾರ್ಟಿ ಫೌಂಡೇಶನ್‌ನ ಮಕ್ಕಳ ತಜ್ಞರಾದ ಡಾ. ಎಲ್.ಎಚ್. ಬಿದರಿ ಹಾಗೂ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಪರಶುರಾಮ ಹಿಟ್ನಳ್ಳಿ ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿಗಳಾದ ಡಾ. ಜಾನ್ ಕಟವಟೆ, ಡಾ. ಮಂಜುನಾಥ ಮಸಳಿ, ಸುರೇಶ್ ಹೊಸಮನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಮೋತಿಲಾಲ ಲಮಾಣಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ರೇಖಾ ದಶವಂತ, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ. ಪ್ರೀಯದರ್ಶನಿ ಪಾಟೀಲ, ನರ್ಸಿಂಗ್ ಕಾಲೇಜಿನ ಬೋಧಕ ಸಿಬ್ಬಂದಿ, ಹಾಗೂ ನಸಿಂರ್ಗ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 