ಕನೌಜ್, ಜ 11, ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಚಿಬ್ರಮುವಾ ಬಳಿಯ ಜಿಟಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಘರ್ಷಣೆಯ ನಂತರ ಎರಡೂ ವಾಹನಗಳು ಹೊತ್ತುರಿದಿವೆಬಸ್‌ನ ಹತ್ತು ಪ್ರಯಾಣಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, 21 ಜನರನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಪೊಲೀಸರು ರಕ್ಷಿಸಿದ್ದಾರೆ.
ಶವಗಳು ಸುಟ್ಟು ಕರಕಲಾಗಿದ್ದು, ಮೂಳೆಗಳು ಪುಡಿಯಾಗಿವೆ. ಆದ್ದರಿಂದ ಡಿಎನ್‌ಎ ಪರೀಕ್ಷೆ ಮಾತ್ರ ಸಾವಿನ ಸಂಖ್ಯೆಯನ್ನು ನಿರ್ಧರಿಸುತ್ತದೆ ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಕಾನ್ಪುರ ಶ್ರೇಣಿ) ಮೋಹಿತ್ ಅಗರ್‌ವಾಲ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.ಬಸ್‌ನಲ್ಲಿ ಸುಮಾರು 45 ಜನರಿದ್ದರು. ಅವರಲ್ಲಿ 21 ಜನರನ್ನು ರಕ್ಷಿಸಿ, 12 ಮಂದಿಯನ್ನು ತಿರ್ವಾವೈದ್ಯಕೀಯ ಕಾಲೇಜಿನಲ್ಲಿ ತಿರ್ವಾ 11 ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇಬ್ಬರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದು, ಅವರನ್ನು ಮನೆಗೆ ಕಳುಹಿಸಲಾಗಿದೆ. ಆದರೆ ಇನ್ನೂ ಬಸ್‌ನ 18 ರಿಂದ 20 ಪ್ರಯಾಣಿಕರು ಕಾಣೆಯಾಗಿದ್ದಾರೆ, ಬಹುಶಃ ಅವರು ಸಾವನ್ನಪ್ಪಿದ್ದರೋ ಇಲ್ಲವೋ ಇದು ಖಚಿತವಾಗಿಲ್ಲ ಎಂದರು.ಫರುಖಾಬಾದ್‌ನಿಂದ ಬಂದು ಜೈಪುರಕ್ಕೆ ಹೋಗುತ್ತಿದ್ದ ಬಸ್ ಮತ್ತೊಂದು ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಾಗ ಟ್ರಕ್‌ನ ಇಂಧನ ಟ್ಯಾಂಕ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಷಾದ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಂಭೀರ ಗಾಯಗೊಂಡವರಿಗೆ ಪರಿಹಾರವಾಗಿ ತಲಾ 50,000 ರೂ. ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.