ಬೈಕ್ ಗೆ ಕಾರು ಡಿಕ್ಕಿ, ಇಬ್ಬರ ಸಾವು
Car collides with bike, two die
ಬೈಕ್ ಗೆ ಕಾರು ಡಿಕ್ಕಿ, ಇಬ್ಬರ ಸಾವು
ದೇವರಹಿಪ್ಪರಗಿ 01: ಬೈಕ್ ಗೆ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಸವನ ಬಾಗೇವಾಡಿ ರಸ್ತೆಯ ಸಾಲಕ್ಕಿಯವರ ಜಮೀನು ಹತ್ತಿರ ಶುಕ್ರವಾರ ಸಂಜೆ 7 ಗಂಟೆಯ ಸುಮಾರಿಗೆ ನಡೆದಿದೆ. ಪಟ್ಟಣದ ನಿವಾಸಿಗಳಾದ ಆರೀಫ್ ಹುಸೇನಸಾಬ ವಡ್ಡೊಡಗಿ(35) ಹಾಗೂ ಮೈಬೂಬಸಾಬ ಖಾದರಬಾಶ್ಯಾ ಕರ್ಜಗಿ(65) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.ಹೂವಿನ ಹಿಪ್ಪರಗಿ ಮಾರ್ಗವಾಗಿ ದೇವರ ಹಿಪ್ಪರಗಿಗೆ ಬೈಕ್ ಮೇಲೆ ಬರುವಾಗ ಬಸವನ ಬಾಗೇವಾಡಿ ಕಡೆಗೆ ಹೊರಟಿದ್ದ ಅಪರಿಚಿತ ಕಾರೊಂದು ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ತಲೆಗೆ ತೀವ್ರ ಪೆಟ್ಟಾಗಿ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನ.
ೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸ್ಥಳಕ್ಕೆ ದೇವರ ಹಿಪ್ಪರಗಿ ಠಾಣೆ ಪಿಎಸ್‌ಐ ಬಸವರಾಜ ತಿಪ್ಪರಡ್ಡಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಅಪಘಾತ ಸಂಬಂಧ ಮೃತ ಬೈಕ್ ಸವಾರನ ಸಹೋದರ ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಇದು ದೇವರಹಿಪ್ಪರಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ.ಫೋಟೋ 1ಡಿಎಚಪಿ1
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 