ಘಟಪ್ರಭಾ ನದಿಗೆ ಕಾರು ಬಿದ್ದು : ಓರ್ವ ಸಾವು
Car falls into Ghataprabha river: one dead
ಘಟಪ್ರಭಾ ನದಿಗೆ ಕಾರು ಬಿದ್ದು : ಓರ್ವ ಸಾವು
ಬೆಳಗಾವಿ 01: ಸಂಚರಿಸುತ್ತಿದ್ದ ಕಾರೊಂದು ಘಟಪ್ರಭಾ ನದಿ ನೀರಿಗೆ ಉರಳಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಬೆನಕೊಳಿ ಗ್ರಾಮದ ಬಳಿ ನಡೆದಿದೆ.
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಕಿರಣ ಎನ್ನುವ ವ್ಯಕ್ತಿಯು ಈ ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಈತ ತನ್ನ ಮಾರುತಿ ಇಕ್ಕೊ ವಾಹನದಲ್ಲಿ ಸಂಚರಿಸುತ್ತಿದ್ದಾಗ ಕಾರು ಘಟಪ್ರಭಾ ನದಿಗೆ ಉರುಳಿಬಿದ್ದಿದೆ. ಯಮಕನಮರಡಿ ಕಡೆಯಿಂದ ಬೆಳಗಾವಿ ಕಡೆಗೆ ಕಾರು ಸಂಚರಿಸುತ್ತಿದ್ದಾಗ ಕಾರು ನದಿ ನೀರಿಗೆ ಬಿದ್ದಿದೆ.
ಕಾರಿನಲ್ಲಿಯೇ ಕಿರಣ ಈತ ಸಿಲುಕಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕಾರು ಮಂಗಳವಾರ ಸಂಜೆ ಅಥವಾ ರಾತ್ರಿ ಬಿದ್ದಿರಬಹುದು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 