ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಮಾಲೀಕ ಪಾರು

ಬೆಂಗಳೂರು,  ಜೂ.6,ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಐಶಾರಾಮಿ ಕಾರೊಂದು ನೋಡ  ನೋಡುತ್ತಿದ್ದಂತೆ‌ ಹೊತ್ತಿ ಉರಿದಿರುವ ಘಟನೆ ನಗರದ ಕಸ್ತೂರಬಾ ರಸ್ತೆಯಲ್ಲಿ ಶನಿವಾರ  ಬೆಳಿಗ್ಗೆ ಸಂಭವಿಸಿದೆ. ಬೆಳಗ್ಗೆ 5 ಗಂಟೆಗೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಮಯ ಪ್ರಜ್ಞೆಯಿಂದ  ಬೆಂಜ್ ಕಾರು ಮಾಲೀಕ ಥಾಮಸ್ ಹೊರಗೆ ಬಂದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಇದು ಟ್ರಯಾಂಗಲ್ ಪ್ರಾಪರ್ಟಿ ಡೆವಲಪ್‌ಮೆಂಟ್ ಎಂಬ ಸಂಸ್ಥೆಗೆ ಸೇರಿದ್ದ ಕಾರು ಇದಾಗಿದೆ ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.