ಗದಗ 26: ಗ್ರಾಮಗಳ ಸ್ವಚ್ಛತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಇಲಾಖೆಯ ಅಧಿಕಾರಿಗಳ ಸಮನ್ವಯತೆಯಿಂದ ಸ್ವಚ್ಛ ಸವರ್ೆಕ್ಷಣ ಗ್ರಾಮೀಣ-2018ರ ಜನಾಂದೋಲನ ಕಾರ್ಯಕ್ರಮಕ್ಕೆ ಪ್ರೋತ್ಸಾಹಿಸಬೇಕೆಂದು ಗದಗ ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ ಅವರು ನುಡಿದರು.
ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರಿಗೆ ಜರುಗಿದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮಗಳಿಗೆ ನಿಯಮಿಸಲ್ಪಟ್ಟ ನೋಡಲ್ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ವೀಕ್ಷಿಸಿದ ನಂತರ ಸ್ವಚ್ಛತೆಯ ಕುರಿತು ಅರಿವು ಮೂಡಿಸುವದರೊಂದಿಗೆ ಗ್ರಾ,ಮಗಳಲ್ಲಿ ಆರೋಗ್ಯಕರ ವಾತಾವರಣ ನಿಮರ್ಿಸಬಹುದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಯ ಸುಸ್ಥಿರತೆ ಕಾಪಾಡುವುದು. ಸ್ವಚ್ಛ ಭಾರತ್ ಅಭಿಯಾನದಲ್ಲಿ ಸರ್ವರೂ ಭಾಗವಹಿಸುವಂತೆ ಪ್ರೋತ್ಸಾಹಿಸುವುದು, ಶುಚಿತ್ವ, ಸ್ವಚ್ಛತೆ ಹಾಗೂ ನೈರ್ಮಲ್ಯದ ಮಹತ್ವದ ಬಗ್ಗೆ ಗ್ರಾಮೀಣ ಸಮುದಾಯದಲ್ಲಿ ಅರಿವು ಮೂಡಿಸುವುದು ಸವರ್ೆಕ್ಷಣಾ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಾಸಣ್ಣ ಕುರಡಗಿ ತಿಳಿಸಿದರು. ಗ್ರಾಮ ಪಂಚಾಯತ್ಗಳಲ್ಲಿ ಸ್ವಚ್ಛತೆಯ ಕುರಿತು ಸ್ಪಧರ್ೆಯನ್ನು ಏರ್ಪಡಿಸಿ ವಿಜೇತರಾದ ಗ್ರಾಮಗಳಿಗೆ ಬಹುಮಾನ ನೀಡಲಾಗುವುದು ಎಂದು ವಾಸಣ್ಣ ಕುರಡಗಿ ನುಡಿದರು.
ಗದಗ ಜಿ.ಪಂ. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸಿ. ಮಹೇಶ ಅವರು ಮಾತನಾಡಿ ದೇಶಾದ್ಯಂತ ಸಮೀಕ್ಷೆಯಲ್ಲಿ 698 ಜಿಲ್ಲೆಗಳು, 6980 ಗ್ರಾಮಗಳು, 34900 ಸಾರ್ವಜನಿಕ ಸ್ಥಳಗಳು ಹಾಗೂ 50 ಲಕ್ಷ ನಾಗರಿಕರ ಸಂದರ್ಶನ ಮತ್ತು ಅವರ ಅಭಿಪ್ರಾಯಗಳನ್ನು ಪಡೆಯುವುದು ಸವರ್ೆಕ್ಷಣದ ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ನೈರ್ಮಲ್ಯ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ಈಗಾಗಲೇ ಜುಲೈ 13 ರಂದು ನವದೆಹಲಿಯಲ್ಲಿ "ಸ್ವಚ್ಛ ಸವರ್ೆಕ್ಷಣ ಗ್ರಾಮೀಣ-2018 ಜನಾಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಸಾರ್ವಜನಿಕ ಸ್ಥಳಗಳ ಸಮೀಕ್ಷೆ, ಸಮುದಾಯದಲ್ಲಿನ ಸ್ವಚ್ಛತೆಯ ದೃಷ್ಟಿಕೋನ, ಅವರ ಶಿಫಾರಸ್ಸುಗಳು ಮತ್ತು ಗ್ರಾಮಗಳ ಘೋಷಣೆ ಮತ್ತು ಪರಿಶೀಲನೆ ಪಡೆದ ಪ್ರಗತಿ ವರದಿ ಹಾಗೂ ನೈರ್ಮಲ್ಯ ಸಮಗ್ರ ಶುಚಿತ್ವದ ನಿಯತಾಂಕಗಳನ್ನು ಗಣನೆಗೆ ತೆಗೆದುಕೊಂಡು ರಾಷ್ಟ್ರ ಮಟ್ಟದಲ್ಲಿ ಜಿಲ್ಲೆ ಮತ್ತು ರಾಜ್ಯಗಳಿಗೆ ಶ್ರೇಯಾಂಕಗಳನ್ನು ನೀಡಿ ಗಾಂಧಿ ಜಯಂತಿ ದಿನದಂದು ಕೇಂದ್ರ ಸಕರ್ಾರವು ಪುರಸ್ಕಾರ ನೀಡಿ ಗೌರವಿಸಲಿದೆ. ಗದಗ ಜಿಲ್ಲೆಗೆ ಈ ನಿಟ್ಟಿನಲ್ಲಿ ಈಗಾಗಲೇ ನಿಯೋಜಿಸಿದ ಅನುಷ್ಟಾನಾಧಿಕಾರಿಗಳು ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಸ್ವಚ್ಛತೆ ಕುರಿತು ಕಾರ್ಯತತ್ಪರರಾಗಬೇಕು. ಸವರ್ೇಕ್ಷಣಾ ಕಾರ್ಯಕ್ರಮದ ಅನುಷ್ಟಾನಕ್ಕಾಗಿ ಪ್ರಸಕ್ತ ಸಾಲಿಗೆ ಗದಗ ಜಿಲ್ಲೆಯಲ್ಲಿ 22 ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳು, 78 ಗ್ರಾ. ಪಂ. ಮಟ್ಟದ ನೋಡಲ್ ಅಧಿಕಾರಿಗಳು ಸೇರಿದಂತೆ ಒಟ್ಟು 100 ನೋಡಲ್ ಅಧಿಕಾರಿಗಳನ್ನು ನಿಯಮಿಸಲಾಗಿದೆ. ಸ್ವಚ್ಛ ಸವರ್ೆಕ್ಷಣ ಕಾರ್ಯಕ್ರಮದಡಿ ಸಮಗ್ರ ಮಾಹಿತಿ ಶಿಕ್ಷಣ ಮತ್ತು ಸಂವಹನ, ರಾಜ್ಯ ಮತ್ತು ಜಿಲ್ಲೆಗಳಲ್ಲಿ ಶುಚಿತ್ವ ಮತ್ತು ನೈರ್ಮಲ್ಯದ ಬಗ್ಗೆ ಸ್ಪಧರ್ೆ, ಸಾರ್ವಜನಿಕ ಸ್ಥಳಗಳಲ್ಲಿ ಸಮೀಕ್ಷೆ/ ಪರಿವೀಕ್ಷಣೆ, ಗ್ರಾ. ಪಂ. ಕಚೇರಿ, ಸಕರ್ಾರಿ ಶಾಲೆಗಳು, ಅಂಗನವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಂತೆ, ಧಾಮರ್ಿಕ ಸ್ಥಳಗಳು, ಬಸ್ ನಿಲ್ದಾಣಗಳು, ನಾಗರಿಕರೊಂದಿಗೆ ಸಂವಾದ, ಸಭೆ, ಕಾರ್ಯಕ್ರಮ ಸುದಾರಣೆ ಬಗ್ಗೆ ಪ್ರತಿಕ್ರಿಯೆ, ಅಭಿಪ್ರಾಯ ಮತ್ತು ಶಿಫಾರಸ್ಸು ಪಡೆಯುವ ಕಾರ್ಯಗಳನ್ನೊಳಗೊಂಡಿದೆ. ಈ ನಿಟ್ಟಿನಲ್ಲಿ ಗದಗ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯತ್ / ಗ್ರಾಮ ಮಟ್ಟದ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಸಿ. ಮಹೇಶ ನುಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ರೂಪಾ ಅಂಗಡಿ, ಗದಗ ತಾ.ಪಂ. ಅಧ್ಯಕ್ಷ ಕೃಷ್ಣ ಗೌಡ ಪಾಟೀಲ, ನರಗುಂದ ತಾ.ಪಂ. ಅಧ್ಯಕ್ಷ ಪ್ರಭುಲಿಂಗಪ್ಪ ಎಲಿಗಾರ, ರೋಣ ತಾ.ಪಂ. ಅಧ್ಯಕ್ಷೆ ಪ್ರೇಮಾ ನಾಯಕ ಸೇರಿದಂತೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರುಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.