ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನ ಜಪ್ತಿಚಾಲಕನ ವಿರುದ್ಧ ಪ್ರಕರಣ ದಾಖಲು
Case registered against impounded tipper driver for illegally transporting sand
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನ ಜಪ್ತಿಚಾಲಕನ ವಿರುದ್ಧ ಪ್ರಕರಣ ದಾಖಲು
ರಾಣೇಬೆನ್ನೂರು 10: ಸಮೀಪದ ಗುತ್ತಲ ರಸ್ತೆ ಮೂಲಕ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದು, ಅದರ ಮಾಲೀಕ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುತ್ತಲ ಹೊಂಡದ ಬಳಿ ತಡರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿ, ವಾಹನಗಳ ತಪಾಸಣೆ ನಡೆಸುತ್ತಿದ್ದರು.
ಇದೇ ಮಾರ್ಗದಲ್ಲಿ ಬಂದಿದ್ದ ಟಿಪ್ಪರ್ ವಾಹನದಲ್ಲಿ (ಕೆಎ 68, 3171) ಮರಳು ಇರುವುದನ್ನು ಗಮನಿಸಿದ್ದರು. ವಾಹನ ತಡೆದು ಪರೀಶೀಲಿಸಿದಾಗ, ಪರ್ಮಿಟ್ ಇಲ್ಲದಿರುವುದು ಗೊತ್ತಾಗಿದೆ’ ಎಂದು ವ್ಯಾಕರಣ ದಾಖಲಿಸಿಕೊಂಡಿರುವ ಗುತ್ತಲ ಠಾಣಾ ಪೊಲೀಸರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆದು, ಟಿಪ್ಪರ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಇದರಿಂದ ಸರ್ಕಾರಕ್ಕೆ ಅಪಾರ ಪ್ರಮಾಣದ ಕಂದಾಯ ವಂಚಿಸಲಾಗುತ್ತಿತ್ತು. ಟಿಪ್ಪರ್ನಲ್ಲಿದ್ದ ಸುಮಾರು ? 12 ಸಾವಿರ ಮೌಲ್ಯದ ಮರಳು ಜಪ್ತಿ ಮಾಡಲಾಗಿದೆ. ಟಿಪ್ಪರ್ ಮಾಲೀಕ ಯತ್ತಿನಹಳ್ಳಿಯ ಬಸವರಾಜ ಗುಡ್ಡನಗೌಡ ಪಾಟೀಲ ಹಾಗೂ ಚಾಲಕ ಪರಶುರಾಮ ಬಾಳಿಕಾಯಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಚಾಲಕನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 