ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಕವಟಗಿಮಠ
Caste survey an attempt to divide Hinduism: Kavatagimath
ಮಾಂಜರಿ 22: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಮಾಜಿ ಮುಖ್ಯ ಸಚೇತಕ್ಕ ಮಹಾಂತೇಶ್ ಕವಟಗಿಮಠ ಆಕ್ರೋಶ ವ್ಯಕ್ತಪಡಿಸಿದರು.
ಅವರು ರವಿವಾರರಂದು ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಶ್ರೀ ಕಾಡ ಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಆಯೋಜಿಸಲದ ಮಹಾಲಯ ಅಮಾವಾಸ್ಯೆಯ ನಿಮಿತ್ತವಾಗಿ ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚೆನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ಮಾಶಿಕ ಚಿಂತನ ಘೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆಯ ಹೆಸರಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಎಲ್ಲ ಜಾತಿಗಳ ಜನರು ಮತಾಂತರವನ್ನು ವಿರೋಧಿಸಿದ್ದಾರೆ. ಕುರುಬ, ಬ್ರಾಹ್ಮಣ, ವಿಶ್ವಕರ್ಮ ಹೀಗೆ ಎಲ್ಲ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂಬ ಹೆಸರು ತರಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕ್ರೈಸ್ತರಾಗಿದ್ದು, ಅವರನ್ನು ಮೆಚ್ಚಿಸಲು ಈ ರೀತಿ ಮಾಡಲಾಗಿದೆ. ಯಾರಾದರೂ ಪಾಕಿಸ್ತಾನದವನು, ಸಂವಿಧಾನ ನಂಬಲ್ಲ ಎಂದು ಹೇಳಿದರೆ, ಅದನ್ನು ಹಾಗೆಯೇ ಬರೆದುಕೊಳ್ಳುತ್ತಾರೆಯೇ? ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಾಗಿದ್ದರೆ, ಅದರಲ್ಲಿ ಜಾತಿಗಳ ಹೆಸರನ್ನು ಏಕೆ ಉಲ್ಲೇಖಿಸುತ್ತಾರೆ? ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರ ಮಾರ್ಗದರ್ಶನದಲ್ಲಿ ಹಿಂದೂಗಳನ್ನು ಒಡೆಯುತ್ತಿದ್ದಾರೆ ಎಂದರು.
ಇದನ್ನು ವಿರೋಧ ಮಾಡುತ್ತಿರುವ ಸಚಿವರು ರಾಜೀನಾಮೆ ಕೊಟ್ಟು ಬರಲಿ. ಕೇವಲ ಹೇಳಿಕೆ ಕೊಟ್ಟು ನಾಟಕವಾಡುವುದು ಬೇಡ. ಹೀಗೆ ಮಾಡಿದರೆ ಜಾತಿ ಸಮುದಾಯದವರು ಸಚಿವರನ್ನು ಕ್ಷಮಿಸುವುದಿಲ್ಲ. ಮತಾಂತರವನ್ನು ತಡೆಯುವುದು ಸರ್ಕಾರದ ಕೆಲಸ. ಆದರೆ ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರಾಯೋಜಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಎಲ್ಲರನ್ನೂ ಸೋನಿಯಾ ಗಾಂಧಿ ಸಮುದಾಯಕ್ಕೆ ಸೇರಿಸುತ್ತಿದ್ದಾರೆ. ನೂರು ಸಿದ್ದರಾಮಯ್ಯ ಬಂದರೂ ಹಿಂದೂ ಧರ್ಮವನ್ನು ಮಲಿನ ಮಾಡಲು ಸಾಧ್ಯವಿಲ್ಲ ಎಂದು ಅವರು ನುಡಿದರು. ಕೇಂದ್ರ ಸರ್ಕಾರ ಈಗಾಗಲೇ ಜನಗಣತಿ ಹಾಗೂ ಜಾತಿ ಗಣತಿಗೆ ಸಿದ್ಧತೆ ನಡೆಸಿದೆ. ಇದು ಅಧಿಕೃತವಾಗಿದೆ. ರಾಜ್ಯ ಸರ್ಕಾರ ನಡೆಸುವ ಸಮೀಕ್ಷೆಗಳು ಅಧಿಕೃತವಲ್ಲ. ಇದನ್ನು ಮುಂದೆ ಬರುವ ಸರ್ಕಾರ ತಿರಸ್ಕರಿಸಬಹುದು. ಜನರು ಏನು ಹೇಳಿದರೂ ಬರೆಯಬಹುದು ಎಂದರೆ ಸರ್ಕಾರ ಇರುವುದು ಏಕೆ? ಇದು ಸಂವಿಧಾನಕ್ಕೆ ಅಪಚಾರವಾಗಿದೆ. ಇದು ಯಾವುದೇ ಜಾತಿಗಳಿಗೆ ನ್ಯಾಯ ಸಿಗುವ ಸಮೀಕ್ಷೆಯಲ್ಲ. ಲಿಂಗಾಯತ ಜಾತಿಯನ್ನು ಒಡೆಯಲು ಯತ್ನಿಸಿದವರು ಈಗ ಹಿಂದೂ ಧರ್ಮವನ್ನು ಒಡೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.
*ಕರ್ನಾಟಕ ಪ್ರಯೋಗ ಶಾಲೆ:*
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕರ್ನಾಟಕವನ್ನು ಪ್ರಯೋಗಶಾಲೆ ಮಾಡಲಾಗಿದೆ. ಈ ಪ್ರಯೋಗದಲ್ಲಿ ಹಿಂದೂ ಧರ್ಮವನ್ನು ಕುಗ್ಗಿಸುವ ಕೆಲಸ ಮಾಡಲಾಗಿದೆ. ದಸರಾದಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ, ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಹೀಗೆ ಅನೇಕ ಕೆಲಸಗಳನ್ನು ಮಾಡಲಾಗುತ್ತಿದೆ. ಈ ಹಿಂದೆ ಮಾಡಿದ ಸಮೀಕ್ಷೆಯಲ್ಲಿ 150 ಕೋಟಿ ರೂ. ನುಂಗಲಾಗಿದೆ. ಈಗ ಮತ್ತೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ದೂರಿದರು. ಚುನಾವಣಾ ಆಯೋಗವನ್ನು ಅವಹೇಳನ ಮಾಡುವುದು, ಹಿಂದೂ ಧರ್ಮಕ್ಕೆ ಅಪಮಾನ ಮಾಡುವುದು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದು ಮೊದಲಾದ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಜನಗಣತಿಯ ಸಮೀಕ್ಷೆಯಲ್ಲಿ ಎಲ್ಲ ವೀರಶೈವ ಲಿಂಗಾಯತ ಸಮುದಾಯದವರು ಮೊದಲು ತಮ್ಮ ಧರ್ಮ ಎಂದು ಕಾಲಂನಲ್ಲಿ ವೀರಶೈವ ಲಿಂಗಾಯತ ಹಾಗೂ ಇನ್ನುಳಿದ ಕಾಲದಲ್ಲಿ ತಮ್ಮ ಉಪಜಾತಿಗಳನ್ನು ನಮೂದಿಸಬೇಕೆಂದು ಶ್ರೀಶೈಲ್ ಪೀಠದ ಜಗದ್ಗುರುಗಳಾದ ಡಾ ಚನ್ನ ಸಿದ್ದರಾಮಯ್ಯ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳು ಹೇಳಿದರು ಈ ವೇಳೆ ಮಾಜಿ ಶಾಸಕ ಕಲ್ಲಪ್ಪಣ್ಣ ಮಗ್ಗೆನ್ನವರ್ ಅಮೃತೇಶ್ವರ ಮಠ ಸಂಸ್ಥಾನ ಜಿಂತೋರ ಅಮೃತೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು ಬಾಳಗೌಡ ಪಾಟೀಲ್ ಪ್ರಸ್ತಾವಿಕವಾಗಿ ಮಾತನಾಡಿ ಮಲ್ಲಪ್ಪ ಸಿಂಧೂರ್ ನಿರೂಪಿಸಿ ವಂದಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 