ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ : ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್.
Celebrate Jayanti meaningfully: Additional District Collector Dr. Duragesh K.R.
ಲೋಕದರ್ಶನ ವರದಿ
ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ : ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್.
ಗದಗ 4: ಕಾಯಕ ಶರಣರ ಜಯಂತಿಯನ್ನು ಫೆಬ್ರುವರಿ 10 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕಾಯಕ ಶರಣರ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಮಟ್ಟದಲ್ಲಿಯೂ ಸಹ ಕಾಯಕ ಶರಣರ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸುವ ಕಾರ್ಯಕ್ರಮವಿದೆ. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾಯಕ ಶರಣರ ಕುರಿತು ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಒಟ್ಟಾರೆಯಾಗಿ ಕಾಯಕ ಶರಣರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಎಸ್.ಎನ್.ಬಳ್ಳಾರಿ, ಡಿ.ಜಿ.ಜೋಗಣ್ಣವರ, ರಮೇಶ ಕೊಳೂರ ಸೇರಿದಂತೆ ಸಮಾಜದ ಹಿರಿಯರು, ಪ್ರಮುಖರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರಿಗೂ ಸ್ವಾಗತಿಸಿ ವಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 