ಮಹನೀಯರ ಜಯಂತಿ ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಣೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
Celebrate the birth anniversary of the greats in a grand and meaningful way: DC Snehal R.
ಲೋಕದರ್ಶನ ವರದಿ
ಧಾರವಾಡ: ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 119 ಜನ್ಮದಿನಾಚರಣೆಯನ್ನು ಏಪ್ರಿಲ್ 5 ರಂದು ಹಾಗೂ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ 135 ನೇ ಜಯಂತಿಯನ್ನು ಏಪ್ರಿಲ್ 14 ರಂದು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಜಿಲ್ಲಾಮಟ್ಟದಲ್ಲಿ ಆಚರಿಸಲಾಗುತ್ತದೆ. ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ಅವರು ಇಂದು (ಮಾ.24) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತದಿಂದ ಆಯೋಜಿಸುವ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿ ಕಾರ್ಯಕ್ರಮಗಳ ಸಿದ್ಧತೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಡಾ. ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಇಬ್ಬರು ಮಹಾತ್ಮರ ಜಯಂತಿಗಳನ್ನು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿಚಾರ ಸಂಕಿರಣ, ವಿಶೇಷ ಉಪನ್ಯಾಸಗಳನ್ನು ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದರು.
ಅಂಬೇಡ್ಕರ ಭವನದಲ್ಲಿ ವಿಚಾರ ಸಂಕಿರಣವನ್ನು ನಡೆಸಲಾಗುತ್ತದೆ. ಜಯಂತಿ ದಿನದಂದು ಬೆಳಿಗ್ಗೆ ನಗರದ ಪ್ರಮುಖ ವೃತ್ತ, ಬೀದಿಗಳ ಮೂಲಕ ಮಹನೀಯರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಆಯೋಜಿಸಲಾಗುತ್ತದೆ. ಜಯಂತಿ ವೇದಿಕೆ ಕಾರ್ಯಕ್ರಮವನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜರುಗಿಸಲಾಗುತ್ತದೆ ಎಂದು ಅವರು ಹೇಳಿದರು.
ಕಳೆದ ವರ್ಷ ಎಸ್.ಎಸ್.ಎಲ್.ಸಿ., ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರು ಹಾಗೂ ಮುಖಂಡರು ಜಯಂತಿ ಕಾರ್ಯಕ್ರಮಗಳಲ್ಲಿ ಕೇವಲ ಹಾಜರಾಗುವುದಷ್ಟೆ ಅಲ್ಲದೆ, ಸಕ್ರಿಯವಾಗಿ ಭಾಗವಹಿಸುವುದು ಅತ್ಯಂತ ಅಗತ್ಯ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ ರಾಂ ಅವರ ಜೀವನ ಸಾಧನೆಗಳು, ಸಮಾಜ ಸೇವೆ ಮತ್ತು ಸಮಾನತೆಯ ಸಂದೇಶಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅವರು ತಿಳಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪೋಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಮಾತನಾಡಿ, ಜಯಂತಿ ಕಾರ್ಯಕ್ರಮಗಳು ಕೆಲವೊಂದು ಸಮುದಾಯಗಳಿಗೆ ಮಾತ್ರ ಸೀಮಿತವಾಗದೆ, ಎಲ್ಲಾ ಸಮುದಾಯಗಳ ಜನರು ಭಾಗವಹಿಸುವಂತಾಗಬೇಕು. ಆಗ ಮಾತ್ರ ಇಂತಹ ಕಾರ್ಯಕ್ರಮಗಳು ನಿಜವಾದ ಅರ್ಥಪೂರ್ಣತೆಯನ್ನು ಪಡೆಯುತ್ತವೆ ಎಂದು ಅವರು ಹೇಳಿದರು.
ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ, ಅವರಿಗೆ ಗೌರವ ನೀಡಿ, ಹಾಗೂ ಕಾರ್ಯಕ್ರಮಗಳಿಗೆ ಆಹ್ವಾನಿಸಿದರೆ ಜಯಂತಿಗಳಿಗೆ ಇನ್ನು ಹೆಚ್ಚಿನ ಮೆರಗು ನೀಡುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ಎಂ.ಅರವಿಂದ, ಲಕ್ಷ್ಮಣ ಬಕ್ಕಾಯಿ, ಸುರೇಶ ಖಾನಪುರೆ, ನಿರ್ಮಲಾ ಚಲವಾದಿ, ಸುಶೀಲಮ್ಮ ಚಲವಾದಿ, ಅಶೋಕ ದೊಡಮನಿ, ಕಲ್ಮೇಶ ಹಾದಿಮನಿ, ದೇವಾನಂದ ರತ್ನಾಕರ್, ಕೆಂಚಪ್ಪ ಮಲ್ಲಮ್ಮನವರ ಸೇರಿದಂತೆ ವಿವಿಧ ಪ್ರಮುಖರು ಮಾತನಾಡಿ, ಜಯಂತಿಗಳ ಅರ್ಥಪೂರ್ಣ ಆಚರಣೆಗೆ ಸಲಹೆ, ಸೂಚನೆಗಳನ್ನು ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಇದ್ದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಸಭೆಯಲ್ಲಿ ಹನಮಂತ ಮಾರಡಗಿ, ಅರ್ಜುನ ಮಾದರ, ಮಹದೇವ ಕೇದಾರ, ಗೌರಮ್ಮ ದೊಡಮನಿ ಸೇರಿದಂತೆ ವಿವಿಧ ದಲಿತ ಮುಖಂಡರು, ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 