ಸಮಾನತೆಯ ಹರಿಕಾರ ’ಹಸಿರು ಕ್ರಾಂತಿ’ಯ ರೂವಾರಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಆಚರಣೆ
Celebrating the 119th birth anniversary of Dr. Babu Jagjivan Ram, the pioneer of equality and the fa
ಲೋಕದರ್ಶನ ವರದಿ
ಕೊಪ್ಪಳ 05: ಭಾರತದ ರಾಜಕೀಯ ಇತಿಹಾಸದ ಧ್ರುವತಾರೆ, ದಲಿತರ ಮತ್ತು ಶೋಷಿತರ ಧ್ವನಿಯಾಗಿದ್ದ ಡಾ. ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಇಲ್ಲಿನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಬಾಬು ಜಗಜೀವನ ರಾಮ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸ್ಮರಿಸಲಾಯಿತು.
ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಉಷಾದೇವಿ ಹಿರೇಮಠ ಅವರು ಮಾತನಾಡಿ, ಬಾಬು ಜಗಜೀವನ ರಾಮ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ದೇಶದ ಹಸಿರು ಕ್ರಾಂತಿಯ ಹಿಂದೆ ನಿಂತ ಶಕ್ತಿ. ರಕ್ಷಣಾ ಸಚಿವರಾಗಿ ಅವರು ನೀಡಿದ ಕೊಡುಗೆ ಅಪಾರ. ಅಸ್ಪೃಶ್ಯತೆ ಮತ್ತು ಸಾಮಾಜಿಕ ತಾರತಮ್ಯದ ವಿರುದ್ಧ ಅವರು ನಡೆಸಿದ ಹೋರಾಟ ಇಂದಿನ ಪೀಳಿಗೆಗೆ ಮಾದರಿಯಾಗಿದೆ, ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಪ್ರಾಚಾರ್ಯರಾದ ಬಸವರಾಜ ಎಸ್ ಎಂ ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ರೊಟ್ಟಿ, ಸಿಬ್ಬಂದಿ ವರ್ಗದವರಾದ ಶ್ರೀಮತಿ ಪೂರ್ಣಿಮಾ ಪಾಟೀಲ್, ಮಾರುತಿ ಎನ್ ಎದಟಿಗೇರಿ, ಕುಮಾರಿ ಋತು ಸುರುವೇ, ಶ್ರೀಮತಿ ರತ್ನ ಒಡೆಯರ್ , ಗುರುಸಿದ್ದಪ್ಪ , ಜಮ್ಮಣ್ಣ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 