ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ: ಚೋಳನ್Celebration by Republican Festival: Cholan
Lokadrshan Daily
1/7/25, 3:58 AM ಪ್ರಕಟಿಸಲಾಗಿದೆ
ಧಾರವಾಡ 07: ಬರುವ ಜನವರಿ 26 ರಂದು ಜಿಲ್ಲಾಡಳಿತದಿಂದ 71 ನೇ ಗಣರಾಜ್ಯೋತ್ಸವವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಕಾರ್ಯಕ್ರಮ ಆಯೋಜನೆಗೆ ವಿವಿಧ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜ.26 ರಂದು ಬೆಳಿಗ್ಗೆ 7.30 ಕ್ಕೆ ಎಲ್ಲ ಶಾಲಾ-ಕಾಲೇಜು, ಸಂಘ-ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 8.30 ಕ್ಕೆ ಆರ್.ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶಗೊಳ್ಳಬೇಕು. 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸುವರು. ಶಾಲಾ ಮಕ್ಕಳು ಹಾಗೂ ಪೊಲೀಸ್ ಪಡೆಗಳು ಪಥ ಸಂಚಲನ ನಡೆಸುವರು.
ಜ. 22 ರಿಂದ 24 ರವರೆಗೆ ಪಥ ಸಂಚಲನ ಮತ್ತು ಸಾಮೂಹಿಕ ಕವಾಯತುಗಳ ತಾಲೀಮು ನಡೆಯಲಿದೆ. ಕ್ರೀಡಾಂಗಣದಲ್ಲಿ ಧ್ವಜಾರೋಹಣ ವ್ಯವಸ್ಥೆ, ವೇದಿಕೆ, ತೆರೆದ ವಾಹನ, ಪೋಡಿಯಂ ಸಿದ್ಧತೆಗಳು ಅಚ್ಚುಕಟ್ಟಾಗಿರಬೇಕು. ಕ್ರೀಡಾಂಗಣದ ಶುಚಿತ್ವ ಮತ್ತು ಸಂಚಾರ ಸುರಕ್ಷತೆಗೆ ಆದ್ಯತೆ ನೀಡಬೇಕು. ಜ. 26 ರಂದು ಸಂಜೆ 4 ಗಂಟೆಗೆ ಡಾ. ಮಲ್ಲಿಕಾಜರ್ುನ ಮನಸೂರ ಕಲಾಭವನದಲ್ಲಿ ಶಾಲಾ-ಕಾಲೇಜು ವಿದ್ಯಾಥರ್ಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸರಕಾರಿ ಕಟ್ಟಡಗಳು, ಸಾರ್ವಜನಿಕ ವೃತ್ತಗಳಿಗೆ ವಿದ್ಯುದ್ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.
ಸನ್ಮಾನ, ಸಾರಿಗೆ; ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಐವರು ಸಾಧಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ಮಾಡಲಾಗುವುದು. ಗಣರಾಜ್ಯೋತ್ಸವ ಸಮಾರಂಭಕ್ಕೆ ವಿವಿಧ ಬಡಾವಣೆಗಳಿಂದ ಹಾಗೂ ಕ್ಯಾರಕೊಪ್ಪದ ಜವಾಹರ ನವೋದಯ ವಿದ್ಯಾಲಯದಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಬೇಕು ಎಂದು ವಾ.ಕ.ರ.ಸಾ.ಸಂ ಅಧಿಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ, ಡಿವೈಎಸ್ಪಿ ರವಿ ನಾಯಕ್, ಜಿ.ಪಂ ಉಪಕಾರ್ಯದಶರ್ಿ ಎಸ್.ಜಿ. ಕೊರವರ, ಹುಡಾ ಆಯುಕ್ತ ನಾಗರಾಜ ಕುಮ್ಮಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.