ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮ ಶನಿವಾರ ಆಚರಣೆ
Celebration of 'Sambhrama Shanivara' at PM SHRI Karnataka Public School
ಲೋಕದರ್ಶನ ವರದಿ
ಗುರ್ಲಾಪೂರ 18: ಸ್ಥಳೀಯ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮ ಶನಿವಾರ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮೂಡಲಗಿ ತಾಲೂಕು ತಹಶೀಲ್ದಾರ್ ಶೈಲೇಶ್ ಗುಡುಮಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ನಶೆಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ. ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿದ್ದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಎಲ್.ಪಿ. ನೇಮಗೌಡ ವಹಿಸಿದ್ದರು. ಮುಖ್ಯೋಪಾಧ್ಯಾಯ ಬಸವರಾಜ ಸಸಾಲಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬಿ.ವೈ. ಮೋಮಿನ್, ಶ್ರೀಕಾಂತ ನಾಯಿಕ, ಅನ್ನಪೂರ್ಣಾ ಪಡಗಾನೂರ, ಕವಿತಾ ಕಟಿಗಿ, ಶೋಭಾ ಪಾಲಭಾವಿ, ವಿದ್ಯಾಶ್ರೀ ನೇಮಗೌಡರ, ಜ್ಯೋತಿ ಕಾಳಪ್ಪುಗೋಳ, ಗಂಗಾ ಕಂಬಾರ, ಸವಿತಾ ಮುಧೋಳ, ಅಡುಗೆ ಸಿಬ್ಬಂದಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೀರ್ತನೆ, ನೃತ್ಯ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಸಂಭ್ರಮ ಶನಿವಾರವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 