ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ತಾಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ Celebration of Brahmashree Narayana Guru Jayanti by the Taluk Administration

ಲೋಕದರ್ಶನ ವರದಿ 

  ಹುಬ್ಬಳ್ಳಿ ಆ.28: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಮಾಜದ ಮುಖಂಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕೀರ ಸನದಿ, ಹುಬ್ಬಳ್ಳಿ ಶಹರ ತಹಶೀಲ್ದಾರ ಮಹೇಶ ಭಗವಂತ ಗಸ್ತೆ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.